Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಉಳಿಸುವುದು ಎಲ್ಲರ ಜವಾಬ್ದಾರಿ - ಕುಮಾರ ನಾಯಕ

ಸುದ್ದಿಮೂಲ ವಾರ್ತೆ ರಾಯಚೂರು, ೆ.22:
ಸಾರ್ವಜನಿಕ ಶಿಕ್ಷಣ ವ್ಯವಸ್ಥೆೆ ಬುಡಮೇಲು ಮಾಡುತ್ತಿಿರುವ ಕೆಲಸ ನಡೆಯುತ್ತಿಿರುವುದು ಕಳವಳಕಾರಿಯಾಗಿದ್ದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆೆ ಹದಗೆಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾಾರಿಯಾಗಿದೆ ಎಂದು ಸಂಸದ ಜಿ.ಕುಮಾರನಾಯಕ ಹೇಳಿದರು.
ನಗರದ ನವೋದಯ ಶಿಕ್ಷಣ ಸಂಸ್ಥೆೆಯ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಿ ವೇದಿಕೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ರಾಜ್ಯ ಮಹಿಳಾ ಒಕ್ಕೂಟ ಮತ್ತು ಶಿಕ್ಷಣ ಹಕ್ಕಿಿಗಾಗಿ ಕೆಲಸ ಮಾಡುತ್ತಿಿರುವ ವಿವಿಧ ಸಂಘಟನೆಗಳ ಸಂಯುಕ್ತಾಾಶ್ರಯದಲ್ಲಿ ನಡೆದ ನಮ್ಮ ಶಾಲೆ ನಮ ಹಕ್ಕು ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು. ಸಂವಿಧಾನದ ಪೀಠಿಕೆ ಯಲ್ಲಿ ಪ್ರಸ್ತಾಾಪಿಸಲಾದ ವಿಷಯಗಳನ್ನು ಸಾಧಿಸಲು ಇರುವ ಸಾಧನ ಶಿಕ್ಷಣ ಮಾತ್ರ. ಹೊಸ ಸಮಾಜ ಕಟ್ಟಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆೆ ಪ್ರಮುಖ ಸಾಧನವಾಗಿದೆ. ಮನೆಯಲ್ಲಿನ ಶಿಕ್ಷಣ ಇತಿಮಿತಿ ಹೊಂದಿರುತ್ತಿಿದ್ದು, ಮಗು ಪರಿಪೂರ್ಣತೆ ಪಡೆಯಲು ಸಾರ್ವಜನಿಕ ಶಿಕ್ಷಣ ಅವಶ್ಯವಾಗಿದೆ ಎಂದು ಹೇಳಿದರು.
ಆಶಯ ನುಡಿಗಳಾಡಿದ ಜಯಣ್ಣ, ಸ್ವಾಾತಂತ್ರ್ಯಕ್ಕೆೆ 77 ವರ್ಷಗಳು ಕಳೆದರೂ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಮುಂದುವರಿದಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸಿದರು.
ಇದುವರೆಗೆ ಶಾಲೆಗಳ ಸಮಸ್ಯೆೆಯನ್ನು ನಾವು ಹಕ್ಕಿಿನ ದೃಷ್ಟಿಿಯಿಂದ ಚರ್ಚಿಸಿದ್ದೇವೆ. ಆದರೆ ಈಗ ಇದು ಕೇವಲ ಹಕ್ಕಿಿನ ಪ್ರಶ್ನೆೆಯಲ್ಲ, ನಮ್ಮ ಸ್ವಾಾಭಿಮಾನದ ಸಂಗತಿಯಾಗಿದೆ ಎಂದರು.
ನಮ್ಮ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ತರಗತಿಗಳು ನಡೆಯದಿರುವುದು ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆೆ ಧಕ್ಕೆೆ ತರುತ್ತಿಿದೆ. ಇರುವ ಶಿಕ್ಷಕರು ಮಕ್ಕಳೊಂದಿಗೆ ಭಾವನಾತ್ಮಕವಾಗಿ ಕೆಲಸ ಮಾಡಬೇಕಿದೆ. ಶಾಲೆಗಳು ಜ್ಞಾನ ಮಂದಿರಗಳಾಗಿದ್ದು, ಅವುಗಳನ್ನು ಉಳಿಸಿ ಅಭಿವೃದ್ಧಿಿಪಡಿಸುವ ಜವಾಬ್ದಾಾರಿ ಸಮಾಜದ ಮೇಲಿದೆ. ಶಿಕ್ಷಕರ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆಯನ್ನು ಸರ್ಕಾರ ಬಲಪಡಿಸಬೇಕಾಗಿದೆ. ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಿಸುವ ನಿಟ್ಟಿಿನಲ್ಲಿ ಶಿಕ್ಷಕರು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಸಹ ಪ್ರಾಾಧ್ಯಪಾಕರಾದ ಡಾ.ಕೆ.ವೆಂಕಟೇಶ್, ಡಾ.ನಿರಂಜನ ಆರಾಧ್ಯ, ಕೆ.ಸತ್ಯನಾರಾಯಣ, ಮೋಕ್ಷಮ್ಮ ಉಪಸ್ಥಿಿತರಿದ್ದರು. ಹಫೀಜುಲ್ಲಾ ಪ್ರಾಾಸ್ತಾಾವಿಕವಾಗಿ ಮಾತನಾಡಿದರು. ಚಂದ್ರಶೇಖರ ರೆಡ್ಡಿಿ ನಿರೂಪಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ