Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪೋಲಿಯೊ ಬೂತ್ ಮಾಹಿತಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಡೆಯಿರಿ: ಡಾ.ಸುರೇಂದ್ರ ಬಾಬು

ಸುದ್ದಿಮೂಲ ವಾರ್ತೆ ರಾಯಚೂರು, ಡಿ.16:
ಇದೆ ಡಿಸೆಂಬರ್ 21ರ ಭಾನುವಾರ ದಂದು ಹುಟ್ಟಿಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕುವ ಪಲ್ಸ್ ಪೋಲಿಯೊ ಕಾರ್ಯಕ್ರಮ ರಾಯಚೂರು ಜಿಲ್ಲೆಯಾದ್ಯಂತ ಹಮ್ಮಿಿಕೊಳ್ಳಲಾಗಿದೆ.
ನಗರ, ಪಟ್ಟಣಗಳಲ್ಲಿಯ ಜನತೆಯು ತಮ್ಮ ಮನೆಗಳಿಗೆ ಹತ್ತಿಿರದ ಪೋಲಿಯೊ ಬೂತ್‌ಗಳ ಮಾಹಿತಿ ಕ್ಯೂಆರ್ ಕೋಡ್ ಸ್ಕ್ಯಾಾನ್ ಮಾಡಿ ತಮಗೆ ಹತ್ತಿಿರದ ಬೂತ್‌ಗಳಲ್ಲಿ ಲಸಿಕೆ ಹಾಕಿ ಅಭಿಯಾನದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪಾಲಕರು ನೋಡಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇವರ ಸಲಹೆಯಂತೆ ಈ ಬಾರಿ ರಾಯಚೂರು, ಮಾನವಿ, ದೇವದುರ್ಗ, ಲಿಂಗಸೂಗುರು, ಸಿಂಧನೂರು ನಗರ ಪ್ರದೇಶಗಳ ನಾಗರಿಕರಿಗೆ ಬೂರ್‌ಗಳ ಮಾಹಿತಿ ಕೊರತೆಯಾಗಬಾರದು ಎಂದು ಕ್ಯೂಆರ್ ಕೋಡ್ ಸ್ಕ್ಯಾಾನರ್ ಸಿದ್ದಪಡಿಸಲಾಗಿದ್ದು, ತಮ್ಮ ಮೊಬೈಲ್‌ಗಳ ಮೂಲಕ ಸ್ಕ್ಯಾಾನ್ ಮಾಡಿ ಬೂತ್‌ಗಳ ಮಾಹಿತಿ ಪಡೆದು ತಮಗೆ ಹತ್ತಿಿರದಲ್ಲಿರುವ ಬೂತ್‌ಗಳಲ್ಲಿ ಎರಡು ಹನಿ ಲಸಿಕೆ ಮಗುವಿಗೆ ಹಾಕಿಸಿ ಪೋಲಿಯೋ ಮೇಲಿನ ನಮ್ಮ ಗೆಲು ಮುಂದುವರೆಸಲು ಕೈಜೊಡಿಸುವಂತೆ ಕೋರಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್. ಅವರು ಮಾತನಾಡಿ, ನಮ್ಮ ಭಾರತ ದೇಶದಲ್ಲಿ ಕೊನೆಯ ಪೋಲಿಯೋ ಪ್ರಕರಣ 2011 ಜನವರಿಯಲ್ಲಿ ಪಶ್ಚಿಿಮ ಬಂಗಾಳ ರಾಜ್ಯದಲ್ಲಿ ವರದಿಯಾದ ನಂತರ ಕಳೆದ 14 ವರ್ಷಗಳಿಂದ ನಮ್ಮ ದೇಶದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೂ ಸಹ ನೆರೆಯ ರಾಷ್ಟ್ರಗಳಲ್ಲಿ ಪ್ರಕರಣಗಳು ಇರುವುದರಿಂದ ಡಿಸೆಂಬರ್ 21 ರಂದು ದೇಶಾದ್ಯಾಾಂತ ಲಸಿಕೆ ಹಾಕಲಾಗುತ್ತಿಿದ್ದು, ನಮ್ಮ ಜಿಲ್ಲೆಯಲ್ಲಿ ಲಸಿಕೆ ಹಾಕಲು ತಂಡಗಳ ರಚನೆ ಮಾಡಲಾಗಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆೆಗಳಲ್ಲಿ, ಬಸ್ ನಿಲ್ದಾಾಣ, ರೈಲು ನಿಲ್ದಾಾಣ, ಅಂಗನವಾಡಿಗಳಲ್ಲಿ ಮತ್ತು ಶಾಲೆಗಳಲ್ಲಿ ಹಾಗೂ ಕೊಳಚೆ ಪ್ರದೇಶ ಮುಂತಾದೆಡೆ ಬೂತ್ ತೆರೆಯಲಾಗುವುದು. ಇದಕ್ಕಾಾಗಿ ಈಗಿನಿಂದಲೆ ಗ್ರಾಾಮಗಳಲ್ಲಿ ಸಿಬ್ಬಂದಿಯವರು ಖುದ್ದು, ಮನೆ ಭೇಟಿ ನೀಡುತ್ತಿಿದ್ದಾರೆ. ಇದರೊಂದಿಗೆ ಸ್ಥಳೀಯ ಸಂಸ್ಥೆೆಗಳ ಕಸ ವಿಲೇವಾರಿ ವಾಹನ, ಆಟೊ ಮೂಲಕ ಮೈಕಿಂಗ್, ಜಾಗೃತಿ ಜಾಥಾ, ಸಾಮಾಜಿಕ ಜಾಲ ತಾಣಗಳ ಮೂಲಕ ನಿರಂತರ ಪ್ರಚಾರ ಕೈಗೊಳ್ಳಲಾಗುತ್ತಿಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಇಲಾಖೆಯ ಅಧಿಕಾರಿಗಳು ಹಾಗೂ ಆರ್.ಸಿ.ಹೆಚ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ