Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸೇಡಂ ಬಿಜೆಪಿ ಟಿಕೆಟ್ ರಾಜನಿಗೊ ರಾಣಿಗೊ?



ಕಲಬುರಗಿ, ಏ.13 : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿಯೂ ಜಿಲ್ಲೆಯ ಸೇಡಂ ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಿಲ್ಲ. ಸೇಡಂನಲ್ಲಿ ಹಾಲಿ ಬಿಜೆಪಿಯ ರಾಜಕುಮಾರ ಪಾಟೀಲ್ ಅವರು ಶಾಸಕರಾಗಿದ್ದು, ಎರಡನೇ ಪಟ್ಟಿಯಲ್ಲಿಯೂ ಅವರ ಹೆಸರು ಇಲ್ಲದಿರುವುದು ಅಚ್ಚರಿ ಮೂಡಿಸಿದೆ.


ಬಿಜೆಪಿ ಮೊದಲ ಪಟ್ಟಿಯಲ್ಲೇ ಜಿಲ್ಲೆಯ 9 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಐವರು ಹಾಲಿ ಶಾಸಕರಲ್ಲಿ ನಾಲ್ವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ಸೇಡಂನ  ಹಾಲಿ ಶಾಸಕ ರಾಜಕುಮಾರ ಪಾಟೀಲ್ ಅವರ ಹೆಸರು ಮೊದಲ ಹಾಗೂ ಎರಡನೇ ಪಟ್ಟಿಯಲ್ಲೂ ಇಲ್ಲದಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಶಾಸಕ ರಾಜಕುಮಾರ ಪಾಟೀಲ್ ಅವರು ಕೆಕೆಆರ್‌ಟಿಸಿ ಅಧ್ಯಕ್ಷರಾಗಿ, ಕಲಬುರಗಿ -ಯಾದಗಿರಿ ಡಿಸಿಸಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ ಸೇಡಂ ಮತಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಧಾನಿ  ನರೇಂದ್ರ ಮೋದಿ ಅವರನ್ನ ಕರೆಸಿ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಿದರು. ಆದರೂ ಸಹ ತೆಲ್ಕೂರ್ ಅವರ ಹೆಸರು ಘೋಷಣೆ ಯಾಗದಿರುವುದು ಹಲವು ಅನುಮಾನಕ್ಕೆ  ಕಾರಣವಾಗಿದೆ.


ಈ ಮಧ್ಯೆ ಸೇಡಂ ಕ್ಷೇತ್ರದಿಂದ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರ ಪತ್ನಿ ಸಂತೋಷ ರಾಣಿ ಪಾಟೀಲ್ ತೆಲ್ಕೂರ್ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಸಂತೋಷಿರಾಣಿ ಪಾಟೀಲ್ ಅವರು ಕ್ಷೇತ್ರದಲ್ಲಿ ಮಹಿಳಾ ಸಹಕಾರಿ ಸಂಘದ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಡಿದ್ದು, ಅವರಿಗೆ ಟಿಕೆಟ್ ಸಿಗುತ್ತದೆ ಎಂದು ಕ್ಷೇತ್ರದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಹೀಗಾಗಿ ಟಿಕೆಟ್ "ರಾಜ"ಕುಮಾರ ಪಾಟೀಲ್ ಅವರಿಗೊ ಅಥವಾ ಸಂತೋಷಿ"ರಾಣಿ" ಪಾಟೀಲ್ ಅವರಿಗೊ ಎಂಬುವುದಕ್ಕೆ ಮೂರನೇ ಪಟ್ಟಿ ಬಿಡುಗಡೆವರೆಗೂ ಕಾಯಬೇಕಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ