Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಚಾವುಂಡರಾಯ ಪ್ರಶಸ್ತಿ'ಗೆ ಹಿರಿಯ ಲೇಖಕ ಪ್ರೊ. ಕೆ.ಇ.ರಾಧಾಕೃಷ್ಣ ಆಯ್ಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 15: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ʻಚಾವುಂಡರಾಯ ಪ್ರಶಸ್ತಿʼ ಪ್ರಕಟಗೊಂಡಿದೆ.

ಶ್ರವಣಬೆಳಗೊಳದ ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೇಜ್ಮೆಂಟ್ ಕಮಿಟಿಯ ವತಿಯಿಂದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ನೀಡಿರುವ ದತ್ತಿಯ 2022ನೇ ಸಾಲಿನ ಚಾವುಂಡಾಯ ಪ್ರಶಸ್ತಿಗೆ ಹಿರಿಯ ಲೇಖಕ ವಿದ್ವಾಂಸ ಪ್ರೊ. ಕೆ.ಇ.ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ. ಚಾವುಂಡರಾಯ ಪ್ರಶಸ್ತಿಯ 30,000 ರೂ. ನಗದು, ಪ್ರಶಸ್ತಿ ಫಲಕ, ಪುಸ್ತಕ ತಾಂಬೂಲಗಳನ್ನು ಒಳಗೊಂಡಿರುತ್ತದೆ.

ಶ್ರವಣಬೆಳಗೊಳದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಮಹಾಸ್ವಾಮಿಗಳು ಶ್ರೀ ಎಸ್.ಡಿ.ಜಿ.ಎಂ.ಎ ಮ್ಯಾನೆಜ್ಮೆಂಟ್ ಕಮಿಟಿಯ ಪರವಾಗಿ ಈ ವಿಶೇಷ ದತ್ತಿ ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುತ್ತಾರೆ. ಪ್ರಾಚೀನ ಜೈನ ಸಾಹಿತ್ಯವನ್ನು ಆಧರಿಸಿ ಆಧುನಿಕ ಕನ್ನಡ ಭಾಷೆಯಲ್ಲಿ ರಚಿಸಿ ಪ್ರಕಟಗೊಂಡಿರುವ ಪ್ರಬಂಧ, ವಿಮರ್ಶೆ, ಕಾದಂಬರಿ, ನಾಟಕ, ಕಥಾ ಸಾಹಿತ್ಯ ಪ್ರಕಾರಗಳ ಲೇಖಕರು, ಅನುವಾದಕರು ಮತ್ತು ಗ್ರಂಥ ಸಂಪಾದಕರುಗಳಿಗೆ ಈ ಪ್ರಶಸ್ತಿ ಪ್ರಧಾನ ಮಾಡಬೇಕು ಎನ್ನುವ ಆಶಯವನ್ನು ದತ್ತಿ ನಿಧಿ ಹೊಂದಿರುತ್ತದೆ. 1995 ರಿಂದ ಇಲ್ಲಿಯವರೆಗೆ 27 ಜನರಿಗೆ ಈ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಮಾಡಿರುತ್ತದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ