Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಕಲಿಕೆಗೆ ಪ್ರೇರಕ ಶಕ್ತಿ ಪ್ರತಿಭಾಕಾರಂಜಿ : ಶರತ್ ಬಚ್ಚೇಗೌಡ

ಸುದ್ದಿಮೂಲ ವಾರ್ತೆ,

ಹೊಸಕೋಟೆ,ಆ.28 : ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳ ಆನಾವರಣಕ್ಕೆ ಪ್ರತಿಭಾಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಹೊಸತನದ ಪ್ರೇರಕ ಶಕ್ತಿ ಮೂಡುತ್ತದೆ ಎಂದು ಶಾಸಕ ಶರತ್‌ಬಚ್ಚೇಗೌಡ ಹೇಳಿದರು.

ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿ ಮಟ್ಟದ ಸೂಲಿಬೆಲೆ ಕ್ಲಸ್ಟರ್ ಹಾಗೂ ಬೆಂಡಿಗಾನಹಳ್ಳಿ ಕ್ಲಸ್ಟರ್ ಮಟ್ಟದ ಜಂಟಿ ಪ್ರತಿಭಾಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಂದು ವಿದ್ಯಾರ್ಥಿಯಲ್ಲೂ ತನ್ನದೇ ಆದ ಹೊಸ ಹೊಸ ಆಲೋಚನಾ ಲಹರಿಗಳು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಹೊಂದಿರುತ್ತಾರೆ. ಅವುಗಳನ್ನು ಹೊರತೆಗೆಯುವ ಕೆಲಸ ಶಿಕ್ಷಕರಿಂದ ಆಗಬೇಕು ಹಾಗೂ ವೇದಿಕೆಗಳು ನಿರ್ಮಾಣವಾಗಬೇಕು ಎಂದು ಹೇಳಿದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ಮಾತನಾಡಿ, ಪೋಷಕರು ಮಕ್ಕಳಿಗೆ ಅಸಕ್ತಿ ಇರುವ ಸಂಗೀತ, ನೃತ್ಯ ,ಕರಾಟೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಆಡಗಿರುತ್ತದೆ. ಅದನ್ನು ಹೊರತೆಗೆಯುವ ಕೆಲಸ ಮನೆ ಮತ್ತು ಶಾಲೆಯಿಂದಲೂ ಆಗಬೇಕು ಎಂದರು.

ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಕಾರಂಜಿಯಾಗಿ ಹೊರ ಚಿಮ್ಮಬೇಕು. ಚಿಮ್ಮಿಸುವ ಕೆಲಸ ಶಿಕ್ಷಕರಿಂದ ಸಾಧ್ಯವಾಗಬೇಕು. ಕಡು ಬಡತನದಲ್ಲಿ ಹುಟ್ಟಿದರೂ ವಿದ್ಯೆ ಎಂಬ ಆಸ್ತಿಯನ್ನು ಗಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ, ತಾ.ಪಂ.ಮಾಜಿ ಸದಸ್ಯ ಡಾ.ಡಿ.ಟಿ.ವೆಂಕಟೇಶ್, ಗುತ್ತಿಗೆದಾರ ದೇವರಾಜಪ್ಪ, ದೊಡ್ಡಹರಳಗೆರೆ ಗ್ರಾ.ಪಂ.ಅಧ್ಯಕ್ಷೆ ನರಸಮ್ಮ, ಇಸಿಓ ರವಿಕುಮಾರ್, ಬಿರ‍್ಪಿ ನಾಗರಾಜ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಂಜುನಾಥ್, ಪ್ರೌಢಶಾಲೆ ಮುಖ್ಯಶಿಕ್ಷಕಿ ಭುವನೇಶ್ವರಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಶ್ರೀನಿವಾಸಪ್ಪ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುನಾಥ್ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ