Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೆಟ್ಟರ್, ಬೋಸರಾಜು, ತಿಮ್ಮಪ್ಪ ಪ್ರಮಾಣ ವಚನ ಸ್ವೀಕಾರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.3: ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಬೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನಸ್ವೀಕರಿಸಿದ ನಂತರ ನೂತನ ಶಾಸಕರುಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಸಭಾಪತಿಗಳು ನೂತನ ಶಾಸಕತ್ರಯರಿಗೆ ಸದನದ ನಿಯಮಾವಳಿಗಳು ಒಳಗೊಂಡ ಕಿಟ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಶಾಸಕರುಗಳಾದ ಹಂಪಯ್ಯ ನಾಯಕ್, ಅಲ್ಲಮ ಪ್ರಭು ಪಾಟೀಲ್, ಎಂ.ವೈ. ಪಾಟೀಲ್, ಅರವಿಂದ ಅರಳಿ, ಡಾ. ಚಂದ್ರಶೇಖರ ಪಾಟೀಲ್, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ