Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಬಿಜೆಪಿ ತೊರೆದು ಜೆಡಿಎಸ್ ಸೇರಿದ ನಗರಸಭಾ ಸದಸ್ಯ ರಾಘವೇಂದ್ರ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.3: ನಗರಸಭೆ ಸದಸ್ಯ ರಾಘವೇಂದ್ರ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಸಂಬಂಧ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಸಿ.ಎಂ ಸುಮಿತ್ರಾ ರಮೇಶ್, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ, ಬಿ.ಎನ್ ರವಿಕುಮಾರ್ ನಾಯಕತ್ವದಲ್ಲಿ ಶಿಡ್ಲಘಟ್ಟ ನಗರಸಭೆಯ ಸದಸ್ಯರಾದ ರಾಘವೇಂದ್ರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ನಮ್ಮಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಅವರಿಗೆ ಅಭಿನಂದನೆಗಳು ತಿಳಿಸಿದರು.

ನಗರಸಭಾ ಸದಸ್ಯ ರಾಘವೇಂದ್ರ ಮಾತನಾಡಿ, ನಾನು ಸುಮಾರು 20 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಮೊಟ್ಟಮೊದಲಿಗೆ ನಗರ ಘಟಕ ಅಧ್ಯಕ್ಷನಾಗಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕಾರ್ಯದರ್ಶಿಯಾಗಿ, ಈಗ ನಗರ ಮೋರ್ಚಾ ಘಟಕದ ಅಧ್ಯಕ್ಷನಾಗಿ ಕೆಲಸ ನಿರ್ವಹಿಸುತ್ತಿದ್ದೆ. ನಾನು ಮನಃಸ್ಫೂರ್ತಿಯಾಗಿ ಇಂದು ದಿನದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.

ಎಲ್ಲರ ಸಹಕಾರದೊಂದಿಗೆ ಒಂದೇ ಮನೆಯವರಂತೆ ನಾವು ಕೆಲಸ ಮಾಡಿಕೊಂಡು ಹೋಗಿ ಬಿ.ಎನ್ ರವಿಕುಮಾರ್ ರವರನ್ನು ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕೆಂಬ ಎಲ್ಲರಿಗೂ ಹೇಳುತ್ತಾ ನಾನು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ವೆಂಕಟೇಶ್, ನಗರಸಭಾ ಸದಸ್ಯರಾದ ವೆಂಕಟಸ್ವಾಮಿ, ಪರಹನ ನಿಜಾಮುದ್ದೀನ್,ವಸಂತ್ ಬಾಲಕೃಷ್ಣ, ರೂಪ ನವೀನ್, ನಂದ ಕಿಶಾನ್, ಮಾಜಿ ಪುರಸಭಾ ಅಧ್ಯಕ್ಷ ರಹಮಾತುಲ್ಲ, ನಗರಸಭೆ ಮಾಜಿ ಸದಸ್ಯ ಶ್ರೀನಾಥ್, ಸಿ.ಡಿ. ಮಂಜು, ಇಲಿಯಾಸ್, ಜೆಡಿಎಸ್ ಮುಖಂಡರಾದ ಹೈದರಾಲಿ, ಎಂಪಿ ಮುಸ್ತಾಕ್, ಸುಗುಣ ಲಕ್ಷ್ಮೀನಾರಾಯಣ, ಆನ್ಸರ್ ಪಾಶ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ