Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಜೆಡಿಎಸ್ ಅಭ್ಯರ್ಥಿ ಬಿ.ಎನ್ ರವಿಕುಮಾರ್ ನಾಮಪತ್ರ ಸಲ್ಲಿಕೆ





ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.17: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎನ್. ರವಿಕುಮಾರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು.

ನಗರದ ಅಂಜನಾದ್ರಿ ಕಾಂಪ್ಲೆಕ್ಸ್ ಇಂದ ನಗರದ ಟಿ.ಬಿ ರಸ್ತೆ ಮೂಲಕ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮಿನಿ ವಿಧಾನಸೌಧವರೆಗೆ ಪಾದಯಾತ್ರೆಯ ಮೂಲಕ ಬಂದು ಚುನಾವಣೆ ಅಧಿಕಾರಿಯಾದ ಜಾವಿದ ನಸೀಮಾ ಖಾನಮ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರವಿಕುಮಾರ್, ನಮ್ಮ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರ ಆಶೀರ್ವಾದದಿಂದ ವಿಧಾನ ಸಭಾ ಕ್ಷೇತ್ರದ ಎಲ್ಲಾ ನಮ್ಮ ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಹಾಗೂ ಈ ಕ್ಷೇತ್ರದ ಸ್ವಾಭಿಮಾನಿ ಮತದಾರರು ಹಾಗೂ ಒಟ್ಟಾರೆಯಾಗಿ ಎಲ್ಲಾರ ಆಶೀರ್ವಾದ ಪಡೆದು ಈ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದೇವೆ. ಕ್ಷೇತ್ರದ ಸ್ವಾಭಿಮಾನಿ ಮತದಾರರು ಈಗಾಗಲೇ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ತೀರ್ಮಾನ ಮಾಡಿದ್ದಾರೆ. ನೂರಕ್ಕೆ ನೂರರಷ್ಟು ಗೆಲುವು ನಿಶ್ಚಿತ ಎಂದರು.

ಈ ಸಂದರ್ಭದಲ್ಲಿ ಬಂಕ್ ಮುನಿಯಪ್ಪ, ತಾದೂರು ರಘು, ಬಿ ಎನ್ ಸಚಿನ್, ಮೇಲೂರು ಮಂಜುನಾಥ್, ಮೇಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಆರ್.ಎ ಉಮೇಶ್, ನಗರದ ಜೆಡಿಎಸ್ ಯುವ ಮುಖಂಡರಾದ ಎಸ್ ಎಂ ರಮೇಶ್, ಗೋವಿಂದರಾಜು, ಮುಗಲಡಪಿ ನಂಜಪ್ಪ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ