Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಜೆಡಿಎಸ್‌ ಅಭ್ಯರ್ಥಿ ಬಿ.ಎನ್ ರವಿಕುಮಾರ್ ಭರ್ಜರಿ ಗೆಲುವು

 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಮೇ 13: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಮೇಲೂರು ಬಿ.ಎನ್ ರವಿಕುಮಾರ್ ಅವರು 68,932 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಜನತೆ ಹಾಗೂ ಜೆಡಿಎಸ್ ಮುಖಂಡರು ಮೇಲೂರು ಬಿ.ಎನ್ ರವಿಕುಮಾರ್ ರವರ ಮನೆಗೆ ಭೇಟಿ ನೀಡಿ ತಂಡೋಪ ತಂಡವಾಗಿ ಆಗಮಿಸಿ ಬಿ.ಎನ್. ರವಿಕುಮಾರ್ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದನೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೇಲೂರು ರವಿಕುಮಾರ್, ಮೊದಲಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸುತ್ತೇನೆ. ಜೆಡಿಎಸ್ ಪಕ್ಷದಲ್ಲಿ ಒಬ್ಬ ಸಕ್ರಿಯವಾಗಿ ಕ್ಷೇತ್ರದಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಒಬ್ಬ ಸಾಮಾನ್ಯ ರೈತನಾಗಿ ಈ ಕ್ಷೇತ್ರದಲ್ಲಿ ನಿರಂತರವಾಗಿ ಜನಸೇವೆಯನ್ನು ಮಾಡುತ್ತ ಜೆಡಿಎಸ್ ಪಕ್ಷವನ್ನು ಕಟ್ಟುವ ಕೆಲಸ ಮಾಡಿದ್ದೇನೆ. ಅದರ ಒಂದು ಪ್ರತಿಫಲ ಎಲ್ಲಾ ಸ್ವಾಭಿಮಾನ ಮತದಾರ ಇವತ್ತು ತೀರ್ಮಾನ ಮಾಡಿ ಈ ಒಂದು ಕ್ಷೇತ್ರದಲ್ಲಿ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ಈ ಕ್ಷೇತ್ರದಲ್ಲಿ ಆಯ್ಕೆ ಮಾಡಿರುವುದಕ್ಕೆ ಋಣಿಯಾಗಿ ನನ್ನ ಮೊದಲ ಆದ್ಯತೆಯನ್ನು ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತೇನೆ. ಈ ಕ್ಷೇತ್ರದ ಜನಸಾಮಾನ್ಯರು ನೆಮ್ಮದಿಯ ಜೀವನ ಮಾಡಬೇಕು. ಈ ಕ್ಷೇತ್ರದ ಮತದಾರರು ನನಗೆ ಕೊಟ್ಟಿರುವಂತಹ ಅಧಿಕಾರಕ್ಕೆ ಪ್ರತಿಯಾಗಿ ಅವರ ನಂಬಿಕೆಗೆ ದಕ್ಕೆ ಬಾರದ ರೀತಿಯಲ್ಲಿ ನಾನು ಪ್ರತಿಯೊಬ್ಬರಿಗೂ ಸ್ಪಂದಿಸಿ ಕೆಲಸ ಮಾಡುತ್ತೇನೆ. ಈ ಕ್ಷೇತ್ರದಲ್ಲಿ ಮುಖ್ಯವಾಗಿ ಮೊದಲಿಗೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಂಕ್ ಮುನಿಯಪ್ಪ,ತಾದೂರು ರಘು, ನಗರಸಭೆ ಅಧ್ಯಕ್ಷ ಸುಮಿತ್ರ ರಮೇಶ್, ಬೇಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಆರ್. ಎ ಉಮೇಶ್ ಗ್ರಾಮ ಪಂಚಾಯತಿ ಸದಸ್ಯ ಸಿ.ಕೆ ಗಜೇಂದ್ರ ಬಾಬು ಜೆಡಿಎಸ್ ಮುಖಂಡರಾದ ಬಿ.ಎನ್ ಸಚಿನ್,ಕುಂದಲಗುರ್ಕಿ ಚಂದ್ರು, ಭೂಸಾ ನಾರಾಯಣಸ್ವಾಮಿ, ಗಂಜಿಗುಂಟೆ ನರಸಿಂಹಮೂರ್ತಿ, ಇನ್ನು ಜೆಡಿಎಸ್ ಮುಖಂಡರು ಯುವಕರು ಕಾರ್ಯಕರ್ತರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ