Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗ ಗಲಾಟೆ: 43 ದುಷ್ಕರ್ಮಿಗಳ ಬಂಧನ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.2: ಶಿವಮೊಗ್ಗ ಈದ್‌ಮಿಲಾದ್‌ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ 43 ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಪೊಲೀಸರ ಮೇಲೂ ಕಲ್ಲು ಎಸೆದಿದ್ದು, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂಧಿಸಿ ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ. ಶಿವಮೊಗ್ಗ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಕ್ರಮ ಕೈಗೊಂಡು, ಶಿವಮೊಗ್ಗದಲ್ಲಿ ಶಾಂತಿ ನೆಲೆಸಿದೆ. ಶಾಂತಿ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಾನೂನು ಬಾಹಿರ ಚಟುವಟಿಕೆ ಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಅದನ್ನು ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ