Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಶಿವಸೇನೆ ಪ್ರತಿಭಟನೆ

ಸುದ್ದಿಮೂಲ ವಾರ್ತೆ ಕಲಬುರಗಿ, ನ.29:
ಕಳೆದ ನ.26 ರಂದು ನಗರದಲ್ಲಿ ಅನಧಿಕೃತವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವಾಗ ಗೋ ಹತ್ಯೆೆ ನಿಷೇಧ ಕಾಯ್ದೆೆ ಜಾರಿಯಲ್ಲಿದ್ದರು, ಕಾನೂನು ಉಲ್ಲಂಘನೆ ಮಾಡಿ ಗೋವು ಸಾಗಾಟ ಮಾಡುತ್ತಿಿರುವುದನ್ನು ಪ್ರಶ್ನಿಿಸಿದ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಶೀವಸೇನೆಯ ರಾಜ್ಯಾಾಧ್ಯಕ್ಷ ಸಿದ್ದಲಿಂಗ ಶ್ರೀಗಳು ಅಕ್ರೋೋಶ ವ್ಯಕ್ತಪಡಿಸಿದರು.
ಶಿವಸೇನೆ ಪಕ್ಷದ ನೇತೃತ್ವದಲ್ಲಿ ನಗರದ ಎಸ್ ವಿ ಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ,ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆೆ ತಡೆದು ಪ್ರತಿಭಟನೆ ನಡೆಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆೆ ಸಂಪೂರ್ಣ ಹದಗೆಟ್ಟಿಿದೆ. ಅಕ್ರಮ ಚಟುವಟಿಕೆಗಳ ಬಗ್ಗೆೆ ನಿಗಾವಹಿಸಬೇಕಿದೆ ಇಲಾಖೆಗಳ ನಿರ್ಲಕ್ಷ್ಯದಿಂದ ಇಂತಹ ಅವಘಡಗಳು ನಡೆಯುತ್ತಿಿವೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಅನಧಿಕೃತ ಗೋ ಸಾಗಾಟ ತಡೆಯಲು ಚೆಕ್ ಪಾಯಿಂಟ್ ತೆರೆಯಬೇಕು. ಸಿಸಿಟಿವಿ ಆಳವಡಿಸಬೇಕು.ಗೋವುಗಳ ಅಕ್ರಮ ಸಾಗಾಟ ಸಂಪೂರ್ಣ ನಿಲ್ಲಬೇಕು. ಅನಧಿಕೃತ ಕಸಾಯಿಖಾನೆಗಳನ್ನು ಬಂದ್ ಮಾಡಬೇಕು.
ತಕ್ಷಣವೇ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗೂಂಡಾಗಳನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಾಯಿಸಿದರು.
ಪಾಳಾದ ಗುರುಮೂರ್ತಿ ಶಿವಾಚಾರ್ಯರು, ಶಿವಸೇನೆಯ ಕಾರ್ಯದರ್ಶಿ ವಿಜಯಕುಮಾರ್ ಪಾಟೀಲ್, ಜಿಲ್ಲಾಧ್ಯಕ್ಷ ಗುರುಶಾಂತ್ ಟೆಂಗಳಿ, ಮುಖಂಡ ಶರಣಯ್ಯ ಹಿರೇಮಠ, ರಾಕೇಶ್ ಜಮಾದಾರ್, ಶಿವರಾಜ್ ಬಾಳ್ಳಿಿ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ