Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ನೂತನ ಜವಳಿ ನೀತಿ ಅನುಷ್ಠಾನ: ಶಿವಾನಂದ ಪಾಟೀಲ

 ಸುದ್ದಿಮೂಲ ವಾರ್ತೆ ಬೆಂಗಳೂರು, ಜ.28:
ಕೈಮಗ್ಗ ನೇಕಾರರು ಹಾಗೂ ಜವಳಿ ಕಾರ್ಖಾನೆಗಳಲ್ಲಿ ದುಡಿಯುತ್ತಿಿರುವ ಮಹಿಳಾ ಕಾರ್ಮಿಕರಿಗೆ 2ರಿಂದ 3 ಸಾವಿರ ರೂಪಾಯಿ ಪ್ರೋೋತ್ಸಾಾಹ ಧನ ಸೇರಿದಂತೆ ಇನ್ನಿಿತರ ಅಂಶಗಳನ್ನು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು ಪರಿಷ್ಕರಿಸಲಾಗಿದ್ದು, ಶೀಘ್ರದಲ್ಲಿ ಇದನ್ನು ಘೋಷಿಸಿ ಅನುಷ್ಠಾಾನಕ್ಕೆೆ ತರಲಾಗುವುದು ಎಂದು ಜವಳಿ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆೆಗೆ ಉತ್ತರಿಸಿದ ಅವರು, ಈ ಹಿಂದಿನ ಮೂರು ಜವಳಿ ನೀತಿಗಳ ಸಾಧಕ-ಬಾಧಕಗಳ ಅಧ್ಯಯನ ಮಾಡಿ, ಎಲ್ಲರ ಸಲಹೆ ಸೂಚನೆಗಳನ್ನು ಪರಿಗಣಿಸಿ, 2025ರಿಂದ 2030ರವರೆಗೆ ಹೊಸ ಜವಳಿ ನೀತಿ ರೂಪಿಸಲಾಗಿದೆ. ಶೀಘ್ರದಲ್ಲಿ ಇದನ್ನು ಘೋಷಿಸಿ, ಕಾರ್ಯಾರೂಪಕ್ಕೆೆ ತರಲಾಗುವುದು ಎಂದು ಹೇಳಿದರು.
ಜವಳಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಿರುವ ಮಹಿಳಾ ಕಾರ್ಮಿಕರಿಗೆ ಹಾಗೂ ಕೈಮಗ್ಗ ನೇಕಾರರಿಗೆ 2ರಿಂದ 3 ಸಾವಿರ ಸಹಾಯಧನ ನೀಡಲಾಗುವುದು. ನೇಕಾರ ಸನ್ಮಾಾನ ಯೋಜನೆಯಡಿ ಕೊಡಲಾಗುತ್ತಿಿದ್ದ 2,500 ರೂ.ಗಳನ್ನು 5 ಸಾವಿರ ರೂ.ಗೆ ಏರಿಸಲಾಗಿದೆ. ಪರಿಷ್ಕೃತ ನೀತಿಯಲ್ಲಿ ಇನ್ನೂ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಜವಳಿ ಕೈಗಾರಿಕೆಗಳಿಗೆ ಹೆಚ್ಚಿಿನ ಮಟ್ಟದಲ್ಲಿ ಸಬ್ಸಿಿಡಿ ನೀಡಲಾಗುತ್ತಿಿದೆ. 1ರಿದ 10 ಹೆಚ್.ಪಿ ವಿದ್ಯುತ್ ಸಂಪರ್ಕ ಪಡೆದ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿಿದೆ. 10 ಹೆಚ್.ಪಿಯಿಂದ 20 ಹೆಚ್.ಪಿ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್‌ಗೆ 1.25 ರೂ. ಶುಲ್ಕ ವಿಧಿಸಿದರೆ, ಬೇರೆ ರಾಜ್ಯಗಳಲ್ಲಿ ಪ್ರತಿ ಯೂನಿಟ್‌ಗೆ 5 ರೂ.ಇದೆ. 2019ರಿಂದ 2024ರವರೆಗೆ 954 ಕೋಟಿ ರೂ. ಸಬ್ಸಿಿಡಿ ನೀಡಲಾಗಿದೆ ಎಂದು ವಿವರಿಸಿದರು.
2024-25ನೇ ಸಾಲಿನ ಬಜೆಟ್‌ನಲ್ಲಿ 2024ರಿಂದ 29ರ ಅವಧಿಯಲ್ಲಿ 10 ಸಾವಿರ ಕೋಟಿ ರೂ. ಬಂಡವಾಳ ಹೂಡಿ 2 ಲಕ್ಷ ಮಂದಿಗೆ ಉದ್ಯೋೋಗ ಸೃಷ್ಟಿಿಸುವುದಾಗಿ ತಿಳಿಸಲಾಗಿದೆ. ಇದಕ್ಕೆೆ ಪೂರಕವಾಗಿ ಹೊಸ ಜವಳಿ ನೀತಿಯನ್ನು ಅನುಷ್ಠಾಾನಕ್ಕೆೆ ತರಲಾಗುತ್ತಿಿದೆ ಎಂದು ಸಚಿವರು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ