Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಜ್‌ಗಾರ್ ಮೇಳದಲ್ಲಿ ಶೋಭಾ ಕರಂದ್ಲಾಜೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ,16: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ 'ರೋಜ್‌ಗಾರ್ ಮೇಳ' ದಲ್ಲಿ ಮೈಸೂರಿನ ವಾಕ್ ಶ್ರಾವಣ ವಿದ್ಯಾ ಸಂಸ್ಥೆಯಿಂದ ಪಾಲ್ಗೊಂಡರು.



ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ವರ್ಚುವಲ್ ಮಾಧ್ಯಮದ ಮೂಲಕ, ದೇಶದ 45 ಭಾಗಗಳಲ್ಲಿ ಏಕಕಾಲದಲ್ಲಿ ನಡೆದ, 71 ಸಾವಿರ ಯುವಜನತೆಗೆ 'ನೇಮಕಾತಿ ಪತ್ರ' ವಿತರಿಸುವ ಬೃಹತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.



10 ಲಕ್ಷ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಳೆದ ವರ್ಷ ಅಕ್ಟೋಬರ್ 22 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದರ ಮುಂದುವರೆದ ಭಾಗವಾಗಿ ಇಂದು 71,000 ಜನರಿಗೆ ನೇಮಕಾತಿ ಪತ್ರಗಳನ್ನು ದೇಶಾದ್ಯಂತ ವಿತರಿಸಲಾಗಿದೆ.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಶ್ರೀ ಪ್ರತಾಪ್ ಸಿಂಹ, ಪೋಸ್ಟಲ್ ವಿಭಾಗದ ಅಧಿಕಾರಿಗಳು, ರೇಲ್ವೇ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ