ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಲಸಗಳಿಗೆ ಸಿದ್ದಗಂಗಾಶ್ರೀ ಶ್ಲಾಘನೀಯ
ಸುದ್ದಿಮೂಲ ವಾರ್ತೆ
ತುಮಕೂರು, ಅ.13: ಗಾಂಧಿ ಜಯಂತಿ ಅಂಗವಾಗಿ ದುಶ್ಚಟಮುಕ್ತ ಸಮಾಜದ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗ್ರಾಮಾಂತರ ತಾಲೂಕು ಮತ್ತು ಜನ ಜಾಗೃತಿ ವೇದಿಕೆ ಸಹಕಾರದೊಂದಿಗೆ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿಗಳು ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಿವಕುಮಾರ ಸ್ವಾಮಿ ಸರ್ಕಲ್ ನಿಂದ ಕನ್ನಡ ಭವನದ ವರೆಗೆ ಹಲವಾರು ಘೋಷಣೆಗಳ ಮೂಲಕ ಯಶಸ್ವಿಯಾಗಿ ಜಾಥಾ ನಡೆಯಿತು.
ವಿ.ರಾಮಸ್ವಾಮಿ ಮಾತನಾಡಿ, ಮಧ್ಯವರ್ಜನ ಶಿಬಿರಗಳ ಮೂಲಕ ಸಾವಿರಾರು ಕುಟುಂಬಗಳಿಗೆ ದಾರಿದೀಪವಾಗಿರುವ ಕುರಿತು ಸಂತಸ ವ್ಯಕ್ತಪಡಿಸಿದರು.
ಡಾ. ಸಿಬಂತಿ ಪದ್ಮನಾಭ ಕೆ.ವಿ, ಮಹಾತ್ಮ ಗಾಂಧೀಜಿಯವರ ಆದರ್ಶ ತತ್ವಗಳು ಜೀವನ ಚರಿತ್ರೆ ಹಾಗೂ ಗಾಂಧೀಜಿ ಮಹತ್ವದ ಕುರಿತು ತಿಳಿಸಿದರು.
ಜಿಲ್ಲಾ ನಿರ್ದೇಶಕರಾದ ದಯಾಶೀಲ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡುತ್ತಿರುವ ಹಲವಾರು ಕಾರ್ಯಕ್ರಮಗಳ ಕುರಿತು ವಿಶ್ಲೇಷಿಸಿ ಮಾರ್ಗದರ್ಶನ ನೀಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಅಮರನಾಥ್ ಶೆಟ್ಟಿ,ಉಪಾಧ್ಯಕ್ಷರಾದ ಗಣೇಶ್ ಪ್ರಸಾದ್ ಸದಸ್ಯರುಗಳಾದ ಕುಮಾರ್, ಚಂದ್ರಶೇಖರ್, ಬಸವರಾಜು ಡಾ.ಸಂಜಯ್ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.