Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಸಿಎಂ: ಸಂಭ್ರಮಾಚರಣೆ

ಸುದ್ದಿಮೂಲವಾರ್ತೆ

ಕೊಪ್ಪಳ,ಮೇ18: ನಗರದ ಕನಕದಾಸ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಸಿದ್ದರಾಮಯ್ಯ ಎರಡನೇ ಅವಧಿಗೆ ಸಿಎಂ ಆಗಿ ಮತ್ತು ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಆಯ್ಕೆಯಾಗಿ ಉತ್ತಮ ಆಡಳಿತ ನೀಡುವ ಭರವಸೆಯೊಂದಿಗೆ ಕೈ ಅಧಿಕಾರಕ್ಕೆ ಬರುತ್ತಿರುವುದು ಹೆಮ್ಮೆ ತಂದಿದೆ ಎಂದರು.

ಈ ವೇಳೆ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ‌. ಗೊಂಡಬಾಳ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪಕ್ಷಕ್ಕೆ ಎರಡು ಕಣ್ಣು ಇದ್ದ ಹಾಗೆ ಇಬ್ಬರೂ ಸೇರಿ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಭಾರಿಸುವ ಮೂಲಕ ದೇಶದಲ್ಲಿ ಹೊಸ ಮನ್ವಂತ ಸೃಷ್ಟಿಸಲಿದೆ ಅದಕ್ಕೆ ಪಕ್ಷ ಮೊದಲು ಎಂದು ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಈಗಿನಿಂದಲೇ ಶ್ರಮವಹಿಸಿ ಕೆಲಸ ಮಾಡಬೇಕು.

ಬರುವ ಸೋಮುವಾರದಿಂದಲೇ ಪಕ್ಷ‌ ಸಂಘಟನೆಯ ಕೆಲಸ ಆರಂಭವಾಗುತ್ತದೆ, ವಿಶೇಷವಾಗಿ ಮಹಿಳಾ ಸಂಘಟನೆ ಬಲಿಷ್ಠ ಗೊಳಿಸುವ ನಿಟ್ಟಲ್ಲಿ ಕೆಲಸ ಮಾಡುವುದಾಗಿ ಇಬ್ಬರೂ ನಾಯಕರಿಗೆ ಶುಭ ಹಾರೈಸಿದರು.

ಈ ವೇಳೆ‌ ಜಿಲ್ಲಾ ಅಲ್ಪಸಂಖ್ಯಾತರ ಕಾಂಗ್ರೆಸ್ ಅಧ್ಯಕ್ಷ ಸಲೀಂ ಅಳವಂಡಿ, ಎಸ್. ಟಿ. ಘಟಕ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಮುಖಂಡರಾದ ಕುಬೇರ ಮಜ್ಜಿಗೆ, ಹನುಮಂತಪ್ಪ ಕೌದಿ, ದ್ಯಾಮಣ್ಣ ಕರಿಗಾರ, ಸೌಭಾಗ್ಯ ಗೊರವರ್, ಅಂಬಿಕಾ ನಾಗರಾಳ, ಪದ್ಮಾವತಿ ಕಂಬಳಿ, ಶಿಲ್ಪಾ ಗುಡ್ಲಾನೂರ, ರೇಖಾ ಬಿಜಾಪೂರ, ಸಂತೋಷ ಕುರಿ, ಪರಶುರಾಮ ಅಣ್ಣಿಗೇರಿ, ಗ್ಯಾನಪ್ಪ, ವಿರುಪಾಕ್ಷಿ, ಬೆಳ್ಳೆಪ್ಪ‌ ಬೇವಿನಹಳ್ಳಿ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ