Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಕಿಿ ಜೊತೆಗೆ ಬೇಳೆ, ಕಾಳು ವಿತರಣೆ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.16:
ಕಾಳ ಸಂತೆ ಮಾರಾಟ ತಪ್ಪಿಿಸಲು 5 ಕೆಜಿ ಅಕ್ಕಿಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಾಂಕ್ವೆೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದ ಅವರು, ಐದು ಕೆ.ಜಿ. ಅಕ್ಕಿಿಯ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.
ಅನ್ನಭಾಗ್ಯದ ಅಕ್ಕಿಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕವಿ ಬೇಂದ್ರೆೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ. ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಹೇಳಿದರು.
ನಾವು ಒಂದು ಕಾಲದಲ್ಲಿ ಅನ್ನಕ್ಕಾಾಗಿ ಅಮೆರಿಕದ ಮೇಲೆ ಅವಲಂಬಿತರಾಗಿದ್ದೆವು. ಈಗ ವಿದೇಶಗಳಿಗೆ ರ್ತು ಮಾಡುವ ಮಟ್ಟಕ್ಕೆೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಾಗುತ್ತಿಿರುವುದು ಬೇಸರದ ಸಂಗತಿ ಎಂದರು.
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು.
ಗೊತ್ತಿಿದ್ದೂ ಗೊತ್ತಿಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆೆ ತೋರಿಸುವ ಅಹಂಕಾರ ಎಂದರು.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆೆಸ್. ಆಹಾರ ಭದ್ರತಾ ಕಾಯ್ದೆೆಯನ್ನು ಜಾರಿಗೆ ತಂದಿದ್ದು ಕಾಂಗ್ರೆೆಸ್‌ನ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಾಳೆ ತಟ್ಟೋೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆೆಸ್ಸಿಿಗೂ ಚಪ್ಪಾಾಳೆ ತಟ್ಟೋೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಿ ಡಿ.ಕೆ ಶಿವಕುಮಾರ್, ಅಹಾರ ಸಚಿವ ಕೆ.ಎಚ್. ಮುನಿಯಪ್ಪ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಶಾಸಕರಾದ ರವಿ, ಬಸವನಗೌಡ ಬಾದರ್ಲಿ, ಶ್ರೀನಿವಾಸ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ರಾಮಪ್ರಸಾದ್, ಆಹಾರ ಇಲಾಖೆಯ ಆಯುಕ್ತರಾದ ವಾಸಿರೆಡ್ಡಿಿ ಜೋತ್ಸ್ನಾಾ, ವ್ಯವಸ್ಥಾಾಪಕ ನಿರ್ದೇಶಕ ಜಗದೀಶ್, ಕಾನೂನು ಮಾಪನ ಶಾಸ ಇಲಾಖೆಯ ನಿಯಂತ್ರಕ ಬಾಬು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ