Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಜರ ಕಾಲದಿಂದಲೂ ಕಲೆ, ಸಂಸ್ಕೃತಿ , ಸಾಹಿತ್ಯಕ್ಕೆ ಪ್ರೋತ್ಸಾಹ : ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಮೈಸೂರು ಅ.16:ಮೈಸೂರು ಮಹಾರಾಜರ ಕಾಲದಿಂದಲೂ ಕೂಡ ಕನ್ನಡ ನಾಡಿನಲ್ಲಿ ಕಲೆ. ಸಂಸ್ಕೃತಿ ಸಾಹಿತ್ಯಕ್ಕೆ ಹೆಚ್ಚಿನ ರೀತಿಯ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಮೈಸೂರು ಸಾಹಿತ್ಯ ನೆಲೆಯ ತವರೂರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅರಮನೆ ವೇದಿಕೆಯಲ್ಲಿ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಇದುವರೆಗೂ ಕೂಡ 30 ಪ್ರಶಸ್ತಿಗಳನ್ನು ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಪ್ರಮುಖರಿಗೆ ನೀಡುತ್ತಾ ಬಂದಿದೆ. ಮೈಸೂರಿನವರೇ ಆದ ಡಾ. ಪದ್ಮ ಮೂರ್ತಿಯವರಿಗೆ ನೀಡುತ್ತಿರುವುದು ನಮಗೆ ಹೆಮ್ಮೆಯ ವಿಷಯ ಸಂಗತಿ ಎಂದರು.

ಸಾಧಕರಾದ ಪದ್ಮಾ ಮೂರ್ತಿಯವರ ತಂದೆಯು ನಮ್ಮ ಹಿರಿಯ ವಕೀಲರಾಗಿದ್ದರು, ಪದ್ಮ ಮೂರ್ತಿಯವರ ದೀರ್ಘಕಾಲ ಸಂಗೀತ ಸೇವೆಯನ್ನು ಗುರುತಿಸಿ ಸರ್ಕಾರವು ಅವರಿಗೆ ಪ್ರಶಸ್ತಿಯನ್ನು ನೀಡುವುದು ಶ್ಲಾಘನೀಯ ವಿಷಯವಾಗಿದೆ. ನಾಡಹಬ್ಬ ಮೈಸೂರು ದಸರಾ 9 ದಿನಗಳ ನಡೆಯಲಿದ್ದು, ಪ್ರತಿಯೊಬ್ಬರು ಕೂಡ ಮೈಸೂರು ದಸರಾವನ್ನು ಅನುಭವಿಸಿ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ನವರು ಮಾತನಾಡಿ, ದಸರಾ ಎಂದರೆ ತಾಯಿ ಚಾಮುಂಡೇಶ್ವರಿ ದುಷ್ಟ ಶಕ್ತಿಯನ್ನು ಸಂಗ್ರಹಿಸಿದ ಇತಿಹಾಸವನ್ನು ಸಾರುವ ಐತಿಹಾಸಿಕ ಇತಿಹಾಸ ದಸರಾ ಇದುವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ನಡೆಯುತ್ತಿರುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಕೂಡ ಉತ್ಸವದಿಂದ ಪ್ರೋತ್ಸಾಹವನ್ನು ನಮ್ಮ ಮುಖ್ಯ ಮಂತ್ರಿಗಳು ನೀಡುತ್ತಾ ಬಂದಿದ್ದಾರೆ ಎಂದರು.

ಹಿಂದೆ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಪ್ರಮುಖ ವ್ಯಕ್ತಿ ನಮ್ಮ ಮೈಸೂರಿನವರೇ ಆದ ದೇವರಾಜ ಅರಸುರವರು. ಅದರಂತೆ ಕರ್ನಾಟಕ ರಾಜ್ಯ ಎಂದು 50 ವರ್ಷ ತುಂಬಿದ ಸಂದರ್ಭದಲ್ಲಿ ನಮ್ಮ ಜೊತೆಯಲ್ಲಿರುವವರು ನಾಡಿನ ಮುಖ್ಯಮಂತ್ರಿ, ಸಿದ್ದರಾಮಯ್ಯನವರು. ಕರ್ನಾಟಕಕ್ಕೆ 50 ವರ್ಷ ಸಂಭ್ರಮವನ್ನು ಒಂದು ವರ್ಷಗಳ ಕಾಲ ಆಚರಿಸುವಂತೆ ಸಲಹೆಯನ್ನು ನೀಡಿದ್ದಾರೆ. ಕನ್ನಡ ನೆಲ ಜಲ ಭಾಷೆಯ ಕುರಿತು ಸಂಪೂರ್ಣ ವರ್ಷವಿಡಿ ತಿಳಿಸುವ ಕಾರ್ಯಕ್ರಮಗಳನ್ನು ಇಲಾಖೆಯಿಂದ ಹಮ್ಮಿಕೊಳ್ಳಲಾಗುವುದು. ನಮ್ಮ ಸರ್ಕಾರದಿಂದ ಈ ಬಾರಿ ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಹಬ್ಬವು ವರ್ಷವಿಡೀ ಆಚರಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸಂಗೀತ ವಿದ್ವಾನ ಪ್ರಶಸ್ತಿ ವಿಜೇತೆಯಾದ ಡಾ. ಪದ್ಮಮೂರ್ತಿ ಅವರು ಮಾತನಾಡಿ ನಾನು ಜನಿಸಿದ ಮೈಸೂರಿನಲ್ಲೆ ಪ್ರಶಸ್ತಿಯನ್ನು ಪಡೆದಿರುವುದು ನಮ್ಮ ಸೌಭಾಗ್ಯ. ಕರ್ನಾಟಕ ಸಂಗೀತಕ್ಕೆ ನಾನು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ನನಗೆ ನೀಡಿರುವ ಗೌರವ ಅಪಾರವಾದದ್ದು. ನನ್ನ ತಂದೆ ತಾಯಿ ನನಗೆ ನೀಡಿದ ವಿದ್ಯಾದಾನ ಇದು ನಾನು ಈ ವೇದಿಕೆ ಮೇಲೆ ನಿಲ್ಲುವಂತೆ ಮಾಡಿದೆ. ಸಂಗೀತಕ್ಕೆ ಪ್ರೋತ್ಸಾಹವನ್ನು ನೀಡಿದ ಪ್ರತಿಯೊಬ್ಬರಿಗೂ ಕೂಡ ನನ್ನ ಧನ್ಯವಾದಗಳು ಎಂದರು.

ಕಾರ್ಯಕ್ರಮದಲ್ಲಿ ಸಂಗೀತದಲ್ಲಿ ಸಾಧನೆ ಗೈದ ಡಾ. ಪದ್ಮ ಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ