Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯರೇ ಪೂರ್ಣಾವಧಿ ಮುಖ್ಯಮಂತ್ರಿ: ಸಚಿವ ಕೆ. ವೆಂಕಟೇಶ್

ಚಾಮರಾಜನಗರ, ಜೂ. 20: ಸಿದ್ದರಾಮಯ್ಯ ಅವರು ಈಗ ಮುಖ್ಯಮಂತ್ರಿಯಾಗಿದ್ದು, ಪೂರ್ಣಾವಧಿಗೆ ಅವರೇ ಮುಂದುವರೆಯುತ್ತಾರೆ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಪಾಳಯದಲ್ಲಿ ಪೂರ್ಣಾವಧಿ ಸಿಎಂ ಚರ್ಚೆ ಇನ್ನೂ ನಿಂತಂತೆ ಕಾಣುತ್ತಿಲ್ಲ.

ಇಂತಹ ಹೇಳಿಕೆ ವಿರುದ್ಧ ಸಂಸದ ಡಿ.ಕೆ. ಸುರೇಶ್‌ ಸೋಮವಾರವಷ್ಟೇ ಗರಂ ಆಗಿ ಸಚಿವ ಮಹದೇವಪ್ಪ ವಿರುದ್ಧ ಹರಿಹಾಯ್ದಿದ್ದರು. ಆದರೆ, ಇದಕ್ಕೆ ಸೊಪ್ಪು ಹಾಕದ ಸಿದ್ದರಾಮಯ್ಯ ಬೆಂಬಲಿಗರು ಮತ್ತೆ ಈ ಚರ್ಚೆಯನ್ನು ಮುನ್ನೆಲೆಗೆ ತರುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಸರಿಯಾಗಿ ಒಂದು ತಿಂಗಳು ಕಳೆದಿದೆ. ಆದರೆ, ಆಂತರಿಕ ಕಿತ್ತಾಟ ಮಾತ್ರ ಇನ್ನೂ ನಿಂತಿಲ್ಲ.

ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್ ಮಾತನಾಡಿ, ಸಿದ್ದರಾಮಯ್ಯ ಅವರು ಈಗಲೂ ಮುಖ್ಯಮಂತ್ರಿಯಾಗಿದ್ದಾರೆ. ಮುಂದೂ ಸಹ ಅವರೇ ಸಿಎಂ ಆಗಿರಲಿದ್ದಾರೆ. ಯಾವುದೇ ಬದಲಾವಣೆ ಇಲ್ಲ ಎಂದು ಎಂದರು.

ಸಿಎಂ ಸಿದ್ದರಾಮಯ್ಯ ಬೆಂಬಲಿಗ ಸಚಿವರು ಆಗಾಗ ಪೂರ್ಣಾವಧಿ ಸಿಎಂ ಪ್ರಸ್ತಾಪ ಮಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ಹೊರಹಾಕಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹೋದರ, ಸಂಸದ ಡಿ.ಕೆ. ಸುರೇಶ್‌ ಬಹಿರಂಗವಾಗಿಯೇ ಕಿಡಿಕಾರಿದ್ದಾರೆ. ಈಚೆಗಷ್ಟೇ ಸಚಿವ ಎಚ್‌.ಸಿ. ಮಹದೇವಪ್ಪ ಅವರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಐದು ವರ್ಷವೂ ಆಡಳಿತ ನಡೆಸುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಗ್ರರಾಗಿದ್ದ ಸಂಸದ ಡಿ.ಕೆ. ಸುರೇಶ್‌, ಮಹದೇವಪ್ಪ ಅವರಿಗೆ ಸಚಿವರಾಗಿ ಕೆಲಸ ಮಾಡುವುದಕ್ಕಿಂತ ಬೇರೆ ವಿಷಯಗಳ ಬಗ್ಗೆಯೇ ಆಸಕ್ತಿ ಜಾಸ್ತಿ ಎಂದು ವ್ಯಂಗ್ಯವಾಡಿದ್ದರು.

 

 

image.png
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ