Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ,

ಮೈಸೂರು, ಮೇ 14: ಸಿಎಂ ಆಯ್ಕೆ ಬಗ್ಗೆ ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದ ಮಾಜಿ ಸಿಎಂ ಸಿದ್ದರಾಮಯ್ಯನವರು, ನೀವು ಸಿಎಂ ಅಭ್ಯರ್ಥಿ ರೇಸ್‌ನಲ್ಲಿ ಇದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಗೆದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ರೇಸ್‌ನಲ್ಲಿ ಇರುವ ಬಗ್ಗೆ ಉತ್ತರಿಸಲು

ಖಡಾಖಂಡಿತವಾಗಿ ನಿರಾಕರಿಸಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆಗುತ್ತದೆ ಎಂದಷ್ಟೇ

ಹೇಳಿದರು.ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಮೊದಲ ಸಚಿವ ಸಂಪುಟ  ಸಭೆಯಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.

ನನ್ನ ಗೆಲುವಿಗೆ ವರುಣ ಕ್ಷೇತ್ರದ ಜನ ಪ್ರಮುಖ ಕಾರಣ. ಕ್ಷೇತ್ರದಲ್ಲಿ ಯತೀಂದ್ರ ಮಾಡಿರುವ ಅಭಿವೃದ್ಧಿ ಕೆಲಸ ಮತ್ತು ಅವರು ಕ್ಷೇತ್ರ ತ್ಯಾಗ ಮಾಡಿ ನನಗೆ ಬಿಟ್ಟುಕೊಟ್ಟುರು.ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದಿದ್ದಾರೆ ಅವರೆಲ್ಲರ ಶ್ರಮದ ಫಲವಾಗಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದರು. ನಾನು ಯಾವುದೇ ಜಾತಿ ವಿರೋಧಿ ಅಲ್ಲ. ಲಿಂಗಾಯತ ವಿರೋಧಿ ಅಂತಾ ನನ್ನ ಬಿಂಬಿಸಲು ಹೊರಟಿದ್ರು. ಆದರೆ ಬಿಜೆಪಿ ಆಟ ಚುನಾವಣೆಯಲ್ಲಿ ನಡೆಯಲಿಲ್ಲ. ಮೋದಿ, ಅಮಿತ್ ಶಾ , ನಡ್ಡಾ ನೂರು ಬಾರಿ ಬಂದರೂ ಏನೂ ನಡೆಯಲ್ಲ ಅಂತಾ ನಾನು ಹೇಳಿದ್ದೆ ಎಂದು ಸಿದ್ಧರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ