Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಮಣ್ಣ ಹರಕೆಯ ಕುರಿ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ, 18;  ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ.ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆಯಾಗಿದೆ ಎಂದಿದ್ದಾರೆ.

ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ. ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ