Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2ಎ ಮೀಸಲಾತಿಗೆ ಕಾನೂನು, ಸಂವಿಧಾನ ತಜ್ಞರೊಂದಿಗೆ ಸಭೆ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ. 23: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಕೂಡಲಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ಮನವಿ ಮಾಡಿತು.

ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದಲ್ಲಿ ಅವರೂ ಮುಖ್ಯ ವಾಹಿನಿಗೆ ಬರಲು ಅನುಕೂಲ ವಾಗುತ್ತದೆ ಎಂದು ಸ್ವಾಮೀಜಿ ತಿಳಿಸಿದರು.

ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದ ಮುಖ್ಯಮಂತ್ರಿಗಳು, ಮೀಸಲಾತಿ ವಿಚಾರವಾಗಿ ಆತುರದ ನಿರ್ಧಾರ ಸಲ್ಲದು. ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಮಾಡಬೇಕು. ಹಾಗಾಗಿ ಸಭೆ ಕರೆದು ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದರು.

ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೇ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜತೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರು.

ಚರ್ಚೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, "ನುಡಿದಂತೆ ನಡೆದ ಮುಖ್ಯಮಂತ್ರಿಗಳು ನೀವು. ಬಸವಣ್ಣ ಅವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದವರು, ರಾಣಿ ಚನ್ನಮ್ಮ ಜಯಂತಿಯನ್ನು ಮೊದಲಬಾರಿಗೆ ಆಚರಿಸಿದವರು ಎಂದು ಜಯಮೃತ್ಯುಂಜಯ ಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಮಾತಿಗೆ ಪ್ರತಿಕ್ರಿಯಿಸಿದ ಶಾಸಕ ವಿನಯ್ ಕುಲಕರ್ಣಿ, ಮುಸ್ಲಿಂ ಸಮುದಾಯದ ಪಾಲಿನ ಮೀಸಲಾತಿಯನ್ನು ಕಿತ್ತು ಕೊಟ್ಟಿದ್ದನ್ನು ನಾವುಗಳು ಅವತ್ತೇ ವಿರೋಧಿಸಿದ್ದೆವು ಎಂದರು.

ಸಭೆಯಲ್ಲಿ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ, ಸಮುದಾಯದ ಸಾವಿರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಸರ್ಕಾರ ಶೀಘವೇ ತೀರ್ಮಾನ ಕೈಗೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ