Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸಲು ಕ್ರಮ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.12: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆರೋಗ್ಯ ಇಲಾಖೆ ಮತ್ತು ಇಂಡಿಯನ್ ಯುನಿಟಿ ಸೆಂಟರ್ ಸಹಯೋಗದಲ್ಲಿ ನಡೆದ ನೈಂಟಿಗೇಲ್ ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ನನ್ನನ್ನೂ ಸೇರಿ ಎಲ್ಲರೂ ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ರೂಪಿಸಬೇಕಿದೆ. ಇದಕ್ಕೆ ಸರ್ಕಾರದ ಜತೆಗೆ ಆರೋಗ್ಯ ಸಿಬ್ಬಂದಿ ಇಚ್ಚಾಶಕ್ತಿಯಿಂದ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ.

ಜಯದೇವ ಆಸ್ಪತ್ರೆ ಒಂದು ಮಾದರಿ. ಈ ಆಸ್ಪತ್ರೆಯಲ್ಲಿ ಎಲ್ಲಾ ರಾಜಕಾರಣಿಗಳು ಚಿಕಿತ್ಸೆ ಪಡೆಯುತ್ತಾರೆ. ಆ ರೀತಿಯ ಗುಣಮಟ್ಟ, ಶುಚಿತ್ವ, ಶಿಸ್ತು ಜಯದೇವ ಆಸ್ಪತ್ರೆಯಲ್ಲಿದೆ. ಇಲ್ಲಿರುವ ವ್ಯವಸ್ಥೆಯನ್ನೇ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲೂ ರೂಪಿಸಲು ಸಾಧ್ಯವಿದೆ. ಇದಕ್ಕೆ ಬೇಕಾಗಿರುವುದು ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಹಾಗೂ ಶ್ರದ್ಧೆ ಮಾತ್ರ ಎಂದರು.

"ಲೇಡಿ ವಿತ್ ದಿ ಲ್ಯಾಂಪ್" ಹೆಸರಾಗಿದ್ದ ಶುಶ್ರೂಷಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಹೆಸರಿನ 21ನೇ ಸಾಲಿನ ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿನಂದಿಸಿದ ಮುಖ್ಯಮಂತ್ರಿಗಳು ನರ್ಸಿಂಗ್ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದರು.

ರೋಗಿಗಳ ಎಲ್ಲಾ ರೀತಿಯ ಚಿಕಿತ್ಸೆಯ ನಿಜವಾದ ವಾರಸುದಾರರು ಶುಶ್ರೂಷಕಿಯರು. ಕಾಲ ಕಾಲಕ್ಕೆ ಶುಶ್ರೂಷಿಕಿಯರು ನಗುತ್ತಾ ಕೆಲಸ ಮಾಡಿದರೆ ಅರ್ಧ ಕಾಯಿಲೆಯೇ ಗುಣವಾಗುತ್ತದೆ. ಆತ್ಮವಿಶ್ವಾಸ ಬಹಳಷ್ಟು ರೋಗಕ್ಕೆ ಮದ್ದು. ನರ್ಸ್ ಗಳ ಸೇವಾ ಮನೋಭಾವ ಮತ್ತು ನಗು ರೋಗಿಗಳ ಆತ್ಮವಿಶ್ವಾಸ ಹೆಚ್ಚಿಸಿ ಗುಣಮುಖರಾಗಲು ನೆರವಾಗುತ್ತದೆ ಎಂದು ಮೆಚ್ಚುಗೆ ಸೂಚಿಸಿದರು.

ಜೆಮಿಮಲ್ ಕ್ರಿಸ್ಟೋಫರ್, ಆರ್.ಪ್ರಿಯದರ್ಶಿನಿ, ಶಶಿ ಕುಮಾರ್, ಜಾನ್ ಮಾರ್ಷಲ್, ಭುವನೇಶ್ವರಿ, ಪ್ರೆಸಿಲ್ಲಾ ರೋಡ್ರಿಗಸ್, ಭಾರತಿ ಪಾಟೀಲ್, ಎಂ.ಎಂ.ರತಿ, ಶೈಲಜ ಬಿ.ಎಂ, ಬಿ.ರೇಣುಕಾ, ಕವಿತಾ, ಡಾ.ಸಂಜಯ್ಎಂ ಪೀರಾಪುರ್ ಅವರಿಗೆ ಮುಖ್ಯಮಂತ್ರಿಗಳು ನೈಟಿಂಗೇಲ್ ಪ್ರಶಸ್ತಿಯನ್ನು ವಿತರಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ