Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು: ಸಿದ್ದರಾಮಯ್ಯ





ಸಾಂಗ್ಲಿ, ಜೂನ್ 25:  ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟದಾಗಿ , ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅವರು ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಹೋರಾಟಕ್ಕೆ ಸಿದ್ಧರಾಗಬೇಕು:
ಸಾಂಗ್ಲಿ ಜಿಲ್ಲೆ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದು, ಪ್ರಮುಖ ರಾಷ್ಟ್ರನಾಯಕರನ್ನು ದೇಶಕ್ಕೆ ನೀಡಿದೆ. ಅಂಬೇಡ್ಕರ್ ಅವರು ಭಾರತದ ಸಂವಿಧಾನದ ಕರ್ತೃ. ಈ ಸಂವಿಧಾನವಿರದಿದ್ದರೆ ಸಮಾಜದ ಶೋಷಿತರು, ದೀನದಲಿತರು, ಅಲ್ಪಸಂಖ್ಯಾತರೂ  ದೇಶದ ರಾಜಕಾರಣದಲ್ಲಿ, ಸಾಮಾಜಿಕವಾಗಿ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲರಿಗೂ ಸಮಾನತೆಯನ್ನು ಬೋಧಿಸುವ ಸಂವಿಧಾನ ಸಮಸಮಾಜದ ನಿರ್ಮಾಣಕ್ಕೆ ಒತ್ತು ನೀಡುತ್ತದೆ. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ನಮ್ಮ ಸಂವಿಧಾನ ಒದಗಿಸಿಕೊಟ್ಟಿದೆ. ಕಾಂಗ್ರೆಸಿಗರು ಸಂವಿಧಾನವನ್ನು ಬದಲಾಯಿಸಲು ಬಿಡಬಾರದು ಎಂಬ ಶಪಥ ಮಾಡಬೇಕು. ಸಂವಿಧಾನ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಬಹುದು. ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ನವರು ಎಲ್ಲ ಹೋರಾಟಗಳಿಗೂ ಸಿದ್ಧರಾಗಬೇಕಿದೆ ಎಂದರು.

ಕೋಮುವಾದಿ ಭಾರತೀಯ ಜನತಾ ಪಕ್ಷ ಸಂವಿಧಾನವನ್ನು ವಿರೋಧಿಸುತ್ತದೆ. ಸಾರ್ವಕರ್, ಗೋಲ್ವಕರ್ ಅವರು ಸಂವಿಧಾನವನ್ನು ಅಂದೇ ವಿರೋಧಿಸಿದ್ದರು. ಧರ್ಮಗಳ ನಡುವೆ ಸಂಘರ್ಷಗಳಿಂದ ರೈತರು, ದೀನದಲಿತರು, ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುವಂತಾಗಿದೆ. ಸಂಘ ಪರಿವಾರದವರು ಈಕೆಲಸವನ್ನು ಮಾಡುತ್ತಿದ್ದಾರೆ. ಭಾರತದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಅವರನ್ನು ಕಿತ್ತೊಗೆಯಬೇಕಾದ ಜವಾಬ್ದಾರಿ ಕಾಂಗ್ರೆಸ್‍ನ  ಮೇಲಿದೆ ಎಂದರು.

ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ:
ಕಾಂಗ್ರೆಸ್ ಪಕ್ಷ ಕರ್ನಾಟಕದ ಜನರಿಗೆ 5 ಗ್ಯಾರೆಂಟಿಗಳನ್ನು ನೀಡಿದ್ದು, ಅಧಿಕಾರಕ್ಕೆ ಬಂದ ದಿನವೇ 5 ಗ್ಯಾರೆಂಟಿಗಳನ್ನು ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಯಿತು. ರಾಜ್ಯದೊಳಗೆ ಎಲ್ಲ ಮಹಿಳೆಯರು ಸರ್ಕಾರಿ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಜ್ಯೋತಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ.

ಅನ್ನಭಾಗ್ಯಯೋಜನೆಗೆ ಅಕ್ಕಿ ನೀಡುವುದಾಗಿ ಎಫ್‌ಸಿಐ ಮೊದಲು ಒಪ್ಪಿತ್ತು. ನಂತರ ಕೇಂದ್ರ ಸರ್ಕಾರದ ನೀತಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ನೀಡಬಾರದು ಎಂದು ಸೂಚನೆ ನೀಡಿತು. ಅಕ್ಕಿ ದಾಸ್ತಾನಿದ್ದರೂ ಅಕ್ಕಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣವನ್ನು ಮಾಡಿದ್ದಾರೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರೂ, ಕರ್ನಾಟಕಕ್ಕೆ ಅಕ್ಕಿ ನೀಡಲು ಒಪ್ಪುತ್ತಿಲ್ಲ. ಈ ಮೂಲಕ ಭಾರತೀಯ ಜನತಾ ಪಕ್ಷದವರು ಬಡವರ ವಿರೋಧಿಗಳು ಎಂಬುದು ನಿರೂಪಿತವವಾಗುತ್ತದೆ ಎಂದರು.

ಕರ್ನಾಟಕದಲ್ಲಿರುವ ನಿರುದ್ಯೋಗಿ ಪದವೀಧರ ಯುವಕರಿಗೆ ತಿಂಗಳಿಗೆ 3 ಸಾವಿರ ರೂ ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ.ಗಳನ್ನು 24 ತಿಂಗಳವರೆಗೆ ನೀಡುವ ಯುವಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಪ್ರಧಾನಿ ಮೋದಿಯವರು ಹಾಗೂ ಕೇಂದ್ರ ಮಂತ್ರಿಮಂಡಲದ ಅನೇಕರು ರಾಜ್ಯಕ್ಕೆ ಭೇಟಿ ನೀಡಿದರು. ಆದರೂ ಕರ್ನಾಟಕದಲ್ಲಿ ಭಾಜಪ ಸೋತಿರುವುದು ನರೇಂದ್ರ ಮೋದಿಯವರ ಜನಪ್ರಿಯತೆ ಮಸುಕ್ಕಾಗುತ್ತಿದೆ ಎಂಬುದನ್ನು ಸಂಕೇತಿಸುತ್ತಿದೆ ಎಂದು ಹೇಳಿದರು.

ಕಾರ್ಯ್ರಕ್ರಮದಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಶಾಸಕಾಂಗ ಪಕ್ಷದ  ನಾಯಕ ಬಾಳಾ ಸಾಹೇಬ್ ತೋರತ್, ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಶಾಸಕರಾದ ವಿಕ್ರಂ ಸಾವಂತ್, ವಿಶ್ವಜಿತ್ ಕದಂ ಹಾಜರಿದ್ದರು.




Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ