Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ರೈತರ ಹಿತ ಕಾಪಾಡೆ: ಸಿದ್ದರಾಮಯ್ಯ ಸಲಹೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.5: ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರದ ಮೂರು ತಂಡಗಳು ರಾಜ್ಯದಲ್ಲಿ ಅಧ್ಯಯನ ಆರಂಭಿಸಿವೆ.

ಕೇಂದ್ರ ತಂಡದ ಸದಸ್ಯರು ಇಂದು ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ, ಮಾಹಿತಿ ಪಡೆಯಿತು. ಆ ನಂತರ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಬರಪರಿಸ್ಥಿತಿ ಕುರಿತು ಪೂರ್ವಭಾವಿ ಸಮಾಲೋಚನೆ ನಡೆಸಿತು. ಮೊದಲ ತಂಡ ನಾಳೆ ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಹಾಗೂ ನಾಳಿದ್ದು, ೭ ರಂದು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಬರ ಪರಿಶೀಲನೆ ನಡೆಸಲಿದೆ.

ಎರಡನೇ ತಂಡ ಶುಕ್ರವಾರ ಗದಗ, ಕೊಪ್ಪಳ ಮತ್ತು 7 ರಂದು ವಿಜಯನಗರ, ಬಳ್ಳಾರಿ ಜಿಲ್ಲೆಗಳ ಬರ ಪರಿಸ್ಥಿತಿ ಅಧ್ಯಯನ ಮಾಡಿ, 8 ರಂದು ಬೆಂಗಳೂರಿಗೆ ಆಗಮಿಸಲಿದೆ.

ಮೂರನೇ ತಂಡ ಶುಕ್ರವಾರ ಚಿಕ್ಕಬಳ್ಳಾಪುರ, ತುಮಕೂರು ಹಾಗೂ 7 ರಂದು ಚಿತ್ರದುರ್ಗ ಮತ್ತು ದಾವಣಗೆರೆ, 8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬರಪರಿಸ್ಥಿತಿ ಅಧ್ಯಯನ ಮಾಡಲಿದೆ. ಮೂರು ತಂಡಗಳು 8 ರಂದು ಬೆಂಗಳೂರಿಗೆ ಆಗಮಿಸಿ, 9 ರಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಕೇಂದ್ರ ತಂಡ ದೆಹಲಿಗೆ ಹಿಂತಿರುಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು.

ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕೆಂದು ಅವರು ಅಭಿಪ್ರಾಯಪಟ್ಟರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ವಿವರಿಸಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ. ಆರ್.ಎಫ್. ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ವಿ. ಮಹೇಶ್‌, ಕೇಂದ್ರ ತಂಡದ ಮುಖ್ಯಸ್ಥ ಅಜಿತ್‌ ಕುಮಾರ್‌ ಸಾಹು ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ