Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣರ ಮಾದರಿಯಲ್ಲೇ ಸಿದ್ದರಾಮಯ್ಯರ ಸಂಪುಟ: ಸಚಿವ‌ ತಂಗಡಗಿ

 

ಸುದ್ದಿಮೂಲ ವಾರ್ತೆ

ಬೆಂಗಳೂರು: ಜು.3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಣ್ಣ ಸಮುದಾಯದ ಮೇಲೆ ವಿಶೇಷ ಕಾಳಜಿ ಹೊಂದಿದ್ದು, ಜಗಜ್ಯೋತಿ ಬಸವಣ್ಣ ಅವರ ಅನುಕರಣೆಯಲ್ಲಿ ತಮ್ಮ ಸಚಿವ ಸಂಪುಟ ರಚಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾಡಳಿತದ ಸಹಯೋಗದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ‌ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿಯೊಂದು ಸಮುದಾಯಕ್ಕೂ ಪ್ರಾತಿನಿಧ್ಯ ದೊರಕಬೇಕು ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಸಮುದಾಯವರಿಗೂ ತಮ್ಮ ಸಂಪುಟದಲ್ಲಿ ಆದ್ಯತೆ ನೀಡಿದ್ದಾರೆ. ಪ್ರತಿಯೊಂದು ಸಣ್ಣ- ಸಣ್ಣ ಸಮುದಾಯವನ್ನು ಪ್ರೋತ್ಸಾಹಿಸಬೇಕು ಎಂಬ ನಿಟ್ಟಿನಲ್ಲಿ ಜಯಂತಿಗಳ ಆಚರಣೆಗೆ ನಾಂದಿಯಾಡಿದ್ದಾರೆ ಎಂದು ತಿಳಿಸಿದರು.

ಹಿಂದೆ ತಾನೂ ತನ್ನ ಜಿಲ್ಲೆಯ ಒಬ್ಬರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡುವಂತೆ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದ್ದೆ. ಈ ವೇಳೆ ಅವರು, ಯಾವ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲವೋ ಅಂತಹವರಿಗೆ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದು ಹೇಳಿ, ಅಂದು ಯಾದವ ಸಮಾಜದವರಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿಸಿದ್ದರು ಎನ್ನುವ ಮೂಲಕ‌ ತಳ ಸಮುದಾಯಗಳ ಅಭಿವೃದ್ಧಿ ಬಗ್ಗೆ ಅವರು ಹೊಂದಿದ್ದ ಕಾಳಜಿಯನ್ನು ನೆನೆದರು.

ಶಿವಶರಣರಂತಹ ಜಯಂತಿಯನ್ನು ಮೊದಲು ಸಿದ್ದರಾಮಯ್ಯ ಅವರೇ 2018ರಲ್ಲಿ ಮಾಡಲು ಅನುವು ಮಾಡಿಕೊಟ್ಟಿದ್ದರು ಎಂದು ತಿಳಿಸಿದರು.

ಹಡಪದ ಸಮಾಜ ಸಣ್ಣದಾದರೂ ಸಂಘಟಿತ ಹಾಗೂ ಬುದ್ದಿವಂತ ಸಮಾಜ. ಕುಲಕಸುಬಿನ ಮೇಲೆ‌ ಜಾತಿ ಬಂದಿದೆ. ಯಾರು ಜಾತಿಯನ್ನು ಹೊತ್ತುಕೊಂಡು ಬಂದಿಲ್ಲ ಎಂದರು.

ಬಸವಣ್ಣನವರ ಅನುಭವ ಮಂಟಪಕ್ಕೆ ಬಂದವರಿಗೆಲ್ಲ ಹಡಪದ ಅಪ್ಪಣ್ಣನವರು ವ್ಯವಸ್ಥೆ ನೋಡಿಕೊಳ್ಳುತ್ತಿದ್ದರು ಅಂತಹ ಮಹಾನ್ ವ್ಯಕ್ತಿಯ ಜತೆಗಿದ್ದವರು ಹಡಪದ ಅಪ್ಪಣ್ಣನವರು ಎಂದು ಶ್ಲಾಘಿಸಿದರು.

ಹಡಪದ ಅಪ್ಪಣ್ಣರಂತಹ ಜಯಂತಿಗಳಿಂದ ಯುವಪೀಳಿಗೆಗೆ ಅವರ ಇತಿಹಾಸ ತಿಳಿಯುವಂತಾಗಬೇಕು.‌ ಮಹಾನೀಯರ ಸಂದೇಶಗಳು ಎಲ್ಲರಿಗೂ ತಿಳಿಯುವಂತಾಗಲಿ ಎಂದು ಸಲಹೆ ನೀಡಿದರು.

ನಿಗಮಕ್ಕೆ ಕೈ-ಕಾಲಿರಲಿಲ್ಲ

ಹಿಂದಿನ‌ ಸರ್ಕಾರ ಹಡಪದ ಸಮಾಜ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದರು. ಕೇವಲ ಪೇಪರ್ ನಲ್ಲಿ ಆದೇಶ ಮಾಡಲಾಗಿತ್ತೇ ಹೊರತು ನೊಂದಣಿ‌ ಕೂಡ ಆಗಿಲ್ಲ. ಕೇವಲ ರಾಜಕೀಯ ಕಾರಣಗಳಿಗೆ ನಿಗಮ ಸ್ಥಾಪನೆ‌ ಮಾಡಿದ್ದರು. ಸಚಿವನಾದ ಮೊದಲು ಅಧಿಕಾರಿಗಳ ಸಭೆ ನಡೆಸಿದಾದ ನಿಗಮಕ್ಕೆ ಕೈ-ಕಾಲು ಇಲ್ಲದಿರುವುದುನ್ನು ತಿಳಿದು ಬೇಸರವಾಯಿತು. ನಿಗಮಕ್ಕೆ ಬೇಕಾದ ಸೂಕ್ತ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಇನ್ನು‌ ಈ ನಿಗಮಕ್ಕೆ ಸೂಕ್ತ ಅನುದಾನ ಒದಗಿಸಬೇಕು ಎಂದು ಸಚಿವ‌ ಶಿವರಾಜ್ ತಂಗಡಗಿ ಅವರು ಇದೇ ವೇಳೆ ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದರು.‌

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ