Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶ : ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.27:ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾ ಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ ಎಂದು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ?

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು?

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ.

ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು.

ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ