Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಸೆಮಿ ಕಂಡಕ್ಟರ್‌ ಸ್ಥಾಪನೆ: ಒಡಂಬಡಿಕೆಗೆ ಸಹಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.24: ಮೈಸೂರಿನಲ್ಲಿ 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕದ ಸ್ಥಾಪನೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ ಒಡಂಬಡಿಕೆಗೆ (ಎಂಒಯು) ಇಂದು ಸಹಿ ಹಾಕಿದೆ.

ಸೆಮಿಕಂಡಕ್ಟರ್ ಅಸೆಂಬ್ಲಿ ಬಿಡಿಭಾಗಗಳನ್ನು ಮತ್ತು ಟೆಸ್ಟಿಂಗ್ ಸೌಲಭ್ಯ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕವನ್ನು ಮೈಸೂರಿನ ಕೋಚನಹಳ್ಳಿಯಲ್ಲಿ ಸ್ಥಾಪಿಸಲಾಗುತ್ತಿದೆ. ಇಎಸ್‌ಡಿಎಂ ಸೆಮಿಕಾನ್ ಪರಿಸರ ವ್ಯವಸ್ಥೆಯ ಪ್ರಮುಖ ನಿರ್ವಹಣಾ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದು, ಈ ಒಡಂಬಡಿಕೆಯು ಮೈಸೂರು ನಗರವನ್ನು ಜಾಗತಿಕ ನಕ್ಷೆಯಲ್ಲಿ ಗುರುತಿಸಲು ಸಹಾಯ ಮಾಡುತ್ತದೆ.

ಈ ಒಪ್ಪಂದದಿಂದ ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ಉತ್ಪಾದನಾ ಅಭಿವೃದ್ಧಿಗೆ ಪೂರಕವಾಗಲಿದೆ. ಹಾಗೂ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ.

ಕೇನ್ಸ್ ಸೆಮಿಕಾನ್ ಪ್ರೈವೇಟ್ ಲಿಮಿಟೆಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಸೌಲಭ್ಯದ ಸಂಸ್ಥೆಯಾಗಿದ್ದು, ಬಹು-ಹಂತದ ಬೋರ್ಡ್‌ಗಳನ್ನು ಉತ್ಪಾದಿಸಲು ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ತಯಾರಿಕಾ ಘಟಕವಾಗಿ ಕಾರ್ಯ ನಿರ್ವಹಿಸುತ್ತದೆ.

ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಮಾಹಿತಿ ತಂತ್ರಜಾನ ಇಲಾಖೆಯ ನಿರ್ದೇಶಕ ದರ್ಶನ್‌, ಕೇನ್ಸ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಗುಪ್ತಾ ಅವರು ಒಡಂಬಡಿಕೆಗೆ ಸಹಿ ಹಾಕುವ ಸಂದರ್ಭದಲ್ಲಿ ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ