Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈನ ಸಮುದಾಯದವರಿಂದ ಮೌನ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ತಿಪಟೂರು, ಜು 12 : ಜೈನ ಮುನಿಗಳ ಹತ್ಯೆ ಖಂಡಿಸಿ ಸಕಲ ಜೈನ ಸಂಘ ತಾಲೂಕು ಘಟಕದ ವತಿಯಿಂದ ನಗರದ ಶ್ರೀರಾಮ ಮಂದಿರದಿಂದ ಉಪವಿಭಾಗಾಧಿಕಾರಿಗಳವರ ಕಚೇರಿಯವರೆಗೂ ಮೌನ ಪ್ರತಿಭಟನಾ

ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಳಿಕ ತಹಸೀಲ್ದಾರ್ ಪವನ್‌ಕುಮಾರ್‌ರವರಿಗೆ ಮನವಿ ಪತ್ರ ಸಲ್ಲಿಸಿದರು.

ಜೈನ ಸಂಘದ ಟ್ರಸ್ಟಿ ಲಲಿತ್ ಶಾಹ ಮಾತನಾಡಿ, ನಮ್ಮ ಜೈನ ಮುನಿಗಳನ್ನು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಅತ್ಯಂತ ಖಂಡನೀಯ. ಇಂತಹ ಅಹಿತಕರ ಘಟನೆಗಳು ನಾಗರೀಕ ಸಮಾಜದ ಮೇಲೆ ಅತ್ಯಂತ ಕೆಟ್ಟ ದುಷ್ಪರಿಣಾಮವನ್ನು ಬೀರುತ್ತದೆ. ಆರೋಪಿಗಳನ್ನ ಕೆಲವು ಪ್ರಭಾವಶಾಲಿ ವ್ಯಕ್ತಿಗಳು ಕಾಪಾಡುವ ಹುನ್ನಾರದಲ್ಲಿದ್ದಾರೆ. ಸರ್ಕಾರ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಜೈನ ಮುಖಂಡ ರಾಜೇಂದ್ರ ಪ್ರಸಾದ್ ಮಾತನಾಡಿ, ಆಧ್ಯಾತ್ಮ ಪ್ರವರ್ತಕರು, ಶಾಂತಿ

ಮತ್ತು ಅಹಿಂಸೆಯ ಪ್ರತಿಪಾದಕರು ಆಗಿರುವ ಜೈನ ಮುನಿಗಳಿಗೆ ಮುಂದೆ ಇಂತಹ ಅಹಿತಕರ ಘಟನೆಗಳಿಂದ ತೊಂದರೆಯಾಗದಂತೆ ಸೂಕ್ತ ಭದ್ರತೆಯನ್ನು ಸರ್ಕಾರ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದರು.

ಮೌನ ಪ್ರತಿಭಟನೆಯಲ್ಲಿ ಜೈನ ಮುಖಂಡರುಗಳಾದ ಭರತ್ ಜೈನ್, ಪ್ರಕಾಶ್ ಜೈನ್,ಮಹಾವೀರ್ ಜೈನ್, ಮುಖೇಶ್ ಜೈನ್, ರಾಹುಲ್‌ಜೈನ್, ಶಾಖಿಲ್ ಜೈನ್, ಸಹನ್‌ಜೈನ್, ಬಾಟಿಕ್‌ಜೈನ್ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಜೈನ ಮುಖಂಡರು,ಮಹಿಳೆಯರುಭಾಗವಹಿಸಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ