Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಪ್ಟಂಬರ್ 15 ರಿಂದ ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲನ: ಸಿಇಓ  

ಸುದ್ದಿಮೂಲವಾರ್ತೆ

ಕೊಪ್ಪಳ ಸೆ 14: ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ‘ಸ್ವಚ್ಛತಾ ಹಿ ಸೇವಾ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಸೆಪ್ಟಂಬರ್ 15 ರಿಂದ ಅಕ್ಟೋಬರ್ 02 ರವೆರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.

ಅಕ್ಟೋಬರ್ 02ರ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ `‘ಸ್ವಚ್ಛ ಭಾರತ ದಿನ’' ವನ್ನಾಗಿ ಆಚರಿಸಲಾಗುತ್ತಿದೆ. ಗಾಂಧೀಜಿ ರವರ ಧ್ಯೇಯವಾಕ್ಯ ‘ಸ್ವಚ್ಛತೆಯೇ ದೈವತ್ವ’ ಎಂಬ ಕನಸನ್ನು ನನಸಾಗಿಸಲು ಸೆಪ್ಟಂಬರ್ 15 ರಿಂದ ಅಕ್ಟೋಬರ್ 02ರ ವರೆಗೆ 17 ದಿನಗಳ ವರೆಗೆ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ‘ಸ್ವಚ್ಛತಾ ಹಿ ಸೇವಾ ಸ್ವಚ್ಛತೆಯೇ ಸೇವೆ’ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲು ಕೇಂದ್ರ ಜಲಶಕ್ತಿ ಮಂತ್ರಾಲಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ.

ಈ ವರ್ಷದ ‘ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ’ ಎಂಬ ವಿಶೇಷ ಆಂದೋಲನದ ಘೋಷವಾಕ್ಯವಾಗಿ ‘ಕಸಮುಕ್ತ ತ್ಯಾಜ್ಯಮುಕ್ತ ಭಾರತ’ ಎಂದು ಘೋಷಿಸಲಾಗಿದ್ದು, ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ, ಸ್ವಚ್ಛ ಸುಂದರ, ಸಧೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದೆ. ಕಳೆದ ವರ್ಷದಂತೆಯೇ ಗ್ರಾಮಗಳ ಸ್ವಚ್ಛತೆಗೆ ಸ್ವಯಂಪ್ರೇರಿತರಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸುವುದು. ಜಿಲ್ಲೆಯ ತಾಲ್ಲೂಕು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹೆಚ್ಚು ಜನ ಜಂಗುಳಿಯಿರುವ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಕೆರೆ, ಹಳ್ಳ, ನದಿ ತೀರ, ಸಾಂಸ್ಥಿಕ ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು ಮತ್ತು ನಾಲಾಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಮತ್ತು ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಬಳಕೆಯನ್ನು ನಿಷೇಧದ ಹಾಗೂ ಇತರ ವಿಷಯಗಳ ಕುರಿತು ಜಾಗೃತಿ, ದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳು, ಎನ್.ಜಿ.ಓ., ಎಸ್.ಹೆಚ್.ಜಿ., ನೆಹರೂ ಯುವ ಕೇಂದ್ರ, ಶಾಲಾ ಕಾಲೇಜು ವಿದ್ಯಾರ್ಥಿ‍ಗಳು ಹಾಗೂ ಸಂಬಂಧಿತ ಪಾಲುದಾರರೊಂದಿಗೆ ತಮ್ಮ ಹಂತದಲ್ಲಿ ‘ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ’ ಜನಾಂದೋಲವನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಸಾರ್ವಜನಿಕರು ಈ ಜನಾಂದೋಲನದಲ್ಲಿ ಪಾಲ್ಗೊಂಡು ಸಧೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಜಿಪಂ ಸಿಇಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ