Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಹುಬ್ಬಳ್ಳಿ, ಜ.24:
ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿಿದ್ದೇವೆ. ನಮ್ಮ ಗ್ಯಾಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಾಯಪಟ್ಟರು.
ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿಿ ಮಂಡಳಿಯ 46,000 ಮನೆಗಳನ್ನು ಅವರು ಅರ್ಹ ಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು.
ಮೊದಲ ಬಾರಿ ಮುಖ್ಯಮಂತ್ರಿಿ ಆಗಿದ್ದಾಗ ನಮ್ಮ ಕಾಂಗ್ರೆೆಸ್ ಸರ್ಕಾರ 1,45,8000 ಮನೆಗಳನ್ನು ಕಟ್ಟಿಿ ಇತಿಹಾಸ ನಿರ್ಮಿಸಿ ವಸತಿ ಕ್ರಾಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿಿದ್ದೇವೆ ಎಂದರು.
ನಾವು ಹೇಳಿದ್ದನ್ನೆೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆೆ ಸುಳ್ಳು ಹೇಳಿಕೊಂಡು ತಿರುಗುತ್ತಿಿದ್ದಾರೆ. ವಿದೇಶದಿಂದ ಕಪ್ಪುು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾಾ? ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಾಾ ಮೇಲ್ದಂಡೆ ಎಲ್ಲದರಲ್ಲೂ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಾತು ತಪ್ಪಿಿದೆ. ರಾಜ್ಯದ ಜನತೆಗೆ ವಂಚಿಸಿದೆ ಎಂದು ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಹ್ಲಾಾದ್ ಜೋಶಿಯವರು ಇದಕ್ಕೆೆಲ್ಲಾ ಉತ್ತರಿಸಬೇಕು ಎಂದು ಹೇಳಿದರು.
ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಿಂತ ಕಡಿಮೆ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿಿ ಆವಾಸ್ ಯೋಜನೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು. ನಮ್ಮ ಸರ್ಕಾರ ಬಂದ ಬಳಿಕ 5500 ಕೋಟಿ ರೂಪಾಯಿ ಹಣವನ್ನು ಎರಡು ವರ್ಷದಲ್ಲಿ ನಾವು, ನಮ್ಮ ಕಾಂಗ್ರೆೆಸ್ ಸರ್ಕಾರ ಮನೆಗಳಿಗಾಗಿ ಖರ್ಚು ಮಾಡಿದ್ದೇವೆ. ಇಷ್ಟೆೆಲ್ಲಾ ಆದರೂ ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹಂಚುತ್ತಾಾ ತಿರುಗುತ್ತಿಿದೆ ಎಂದು ಟೀಕಿಸಿದರು.
ರೈತರ ಪಂಪ್‌ಸೆಟ್‌ಗಳಿಗೆ 2500 ಕೋಟಿ ಸಬ್ಸಿಿಡಿ ಪ್ರತಿ ವರ್ಷ ಕೊಡುತ್ತಿಿದ್ದೇವೆ. ಇದರ ಜೊತೆಗೆ ವಿಧವಾ ವೇತನ, ವೃದ್ದಾಪ್ಯ ವೇತನ ಸೇರಿ ಪ್ರತಿಯೊಂದಕ್ಕೂ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಲೇ ಇದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ