Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಮತದಾರರ ನೋಂದಣಿಗೆ ಅಭಿಯಾನ

ಸುದ್ದಿಮೂಲ ವಾರ್ತೆ

ತುಮಕೂರು, ಅ.25:ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹ ಶಿಕ್ಷಕ ಮತದಾರರ ನೋಂದಣಿಗಾಗಿ ಜಿಲ್ಲಾದ್ಯಂತ ಅ. 25ರ ಬುಧವಾರದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿಗೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಡಾ. ವೈ.ಎ. ನಾರಾಯಣಸ್ವಾಮಿ ಅವಧಿಯು 2024ರ ಜೂನ್ 21ಕ್ಕೆ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ನಿಗಧಿತ ಶೈಕ್ಷಣಿಕ ಸಂಸ್ಥೆಗಳಲ್ಲಿರುವ ಅರ್ಹ ಶಿಕ್ಷಕ ಮತದಾರರಿಗೆ ನಮೂನೆ-19ನ್ನು ವಿತರಿಸಿ ಭರ್ತಿ ಮಾಡಿದ ಅರ್ಜಿಯನ್ನು ನಿಗಧಿತ ಅವಧಿಯೊಳಗೆ ಅವರಿಂದ ಪಡೆಯಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಹೋಬಳಿವಾರು ಶಿಕ್ಷಣ ಸಂಸ್ಥೆಗಳನ್ನು ಪಟ್ಟಿ ಮಾಡಿ ಮತದಾರರ ನೋಂದಣಿ ದಿನಾಂಕ ಹಾಗೂ ಸ್ಥಳವನ್ನು ನಿಗಧಿಪಡಿಸಿ ಈಗಾಗಲೇ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಶಿಕ್ಷಣ ಸಂಸ್ಥೆಗಳಿಂದ ನೋಂದಣಿ ಅರ್ಜಿ ಸ್ವೀಕರಿಸಲು ಅವಕಾಶವಿರುವುದಿಲ್ಲವೆಂದು ತಿಳಿಸಿದರು.

ಪಾಲಿಕೆ ಉಪ ಆಯುಕ್ತೆ ಸುಮತಿ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಅ. 26ರಂದು ತುಮಕೂರು ವಿಶ್ವವಿದ್ಯಾನಿಲಯ, ಅ.27 ರಂದು ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ, ಅ.30 ರಂದು ಎಸ್‌ಐಟಿ ಕಾಲೇಜು ಹಾಗೂ ಅ.31 ರಂದು ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶಿಕ್ಷಕ ಮತದಾರರ ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ವಿವಿ ಕುಲಸಚಿವೆ ನಹೀದಾ ಜಂಜಂ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ