Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರದ ಐತಿಹಾಸಿಕ ನಿರ್ಧಾರ:ಎಸ್.ಪಿ. ಮುದ್ದಹನುಮೇಗೌಡ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.29: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದು ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಹೇಳಿದ್ದಾರೆ.



ಅವರು ಇಂದು ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಯಾವುದೇ ಸರ್ಕಾರ ಹಿಂದೆ ಮುಂದೆ ನೋಡುತ್ತದೆ. ಪ್ರಮುಖ ನಿರ್ಧಾರಗಳು ಸುಭದ್ರ ಸರ್ಕಾರದಿಂದ ಸಾಧ್ಯ. ಬಿಜೆಪಿ ಸರ್ಕಾರ ಮೀಸಲಾತಿ ವಿಷಯದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿಗೆ ಶೇ.15ರಿಂದ 17ಕ್ಕೆ, ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ 7ಕ್ಕೆ ಹೆಚ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಒಳಮೀಸಲಾತಿ ವಿಷಯದಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದ ನಂತರವೂ ಈ ಬಗ್ಗೆ ಚರ್ಚೆಯಾಗಿರಲಿಲ್ಲ. ಒಳಮೀಸಲಾತಿಗೆ ಹೋರಾಟಗಳು ನಡೆಯುತ್ತಲೇ ಇದ್ದವು. ಇತರ ಹಿಂದುಳಿದ ವರ್ಗ ಕೋಟಾದಲ್ಲಿ ಹೊಸ 2-ಸಿ, 2-ಡಿ ಪ್ರವರ್ಗ ಸೃಷ್ಟಿ ಮಾಡಿ ಶೇಕಡ 4ರಷ್ಟು ಮೀಸಲಾತಿ ಹೆಚ್ಚಿಸಲಾಗಿದೆ. 2-ಸಿಯಡಿ ಒಕ್ಕಲಿಗರಿಗೆ ಶೇ. 2, ಲಿಂಗಾಯತರಿಗೆ ಶೇ.7ರಷ್ಟು ಹೆಚ್ಚಿಸಲಾಗಿದೆ. ಬಿಜೆಪಿ ಸರ್ಕಾರ ಹೆಚ್ಚಿಸಿದ ಮೀಸಲಾತಿ ಒಟ್ಟಾರೆ ಸ್ವೀಕೃತವಾಗಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿರುವುದಲ್ಲದೆ, ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೆ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದೆ ಎಂದು ಅವರು ಹೇಳಿದರು. ಡಬಲ್ ಇಂಜಿನ್ ಸರ್ಕಾರದ ಸಾಧನೆ ಮತ್ತು ಅಭಿವೃದ್ಧಿಯನ್ನು ಮುಂದಿಟ್ಟು ಬಿಜೆಪಿ ಜನರ ಮುಂದೆ ಹೋಗುತ್ತಿದೆ ಎಂದು ಮುದ್ದಹನುಮೇಗೌಡ ಹೇಳಿದರು.

ವಿಧಾನಪರಿಷತ್ ಸದಸ್ಯೆ ಹಾಗೂ ಬಿಜೆಪಿ ರಾಜ್ಯ ವಕ್ತಾರರಾದ ಡಾ. ತೇಜಸ್ವಿನಿಗೌಡ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಿರುವ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದು ಆದೇಶ ತೆಗೆದುಹಾಕಿ ಮತ್ತೆ ಅವರಿಗೆ ಆ ಮೀಸಲಾತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಆದರೆ, ಸಂವಿಧಾನದಲ್ಲಿ ಧರ್ಮಾಧರಿತ ಮೀಸಲಾತಿ ಊರ್ಜಿತವಲ್ಲ. ಆಂಧ್ರದಲ್ಲೂ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು. ಆದರೆ, ಈ ವಿಷಯ ಸುಪ್ರೀಂಕೋರ್ಟ್‍ನಲ್ಲಿದೆ. ಅಸ್ಪøಷ್ಯತೆ, ಬಡತನ, ಅನಕ್ಷರತೆ ನಿರ್ಮೂಲನೆಯಾಗುವವರೆಗೆ ಮೀಸಲಾತಿ ನೀಡಬೇಕಾಗುತ್ತದೆ. ಅದರಂತೆ, ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನೂ ಒದಗಿಸುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಾಂದ ಉಪಸ್ಥಿತರಿದ್ದರು.

BJP Government's Historic Decision on Reservation-:S.P. Muddahanumegowda
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ