Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪೀಕರ್ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ: ಕುಮಾರಸ್ವಾಮಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.20: ಅಧಿಕಾರಿಗಳ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಮುನ್ನ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿಗಳು ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಸಿದರು. ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ನಾನು ಸಿಎಂ ಆಗಿದ್ದ ವೇಳೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ಅವರನ್ನು ಗೌರವದಿಂದ ನಡೆಸಿಕೊಂಡಿದ್ದೇನೆ. ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಕೂಡ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿಲ್ಲ. ಯಾವುದೇ ಸಂದರ್ಭದಲ್ಲಿಯೂ ಅಧಿಕಾರಿಗಳಿಂದ ಯಾರಿಗೂ ಅಥಿತ್ಯ ಕೊಡಿಸಿಲ್ಲ. ಹೀಗೆ ಸುಳ್ಳು ಹೇಳುವುದಕ್ಕೆ ನಾಚಿಕೆ ಆಗಬೇಕು ಇವರಿಗೆ. ನನ್ನ ವಿರುದ್ಧ ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂದು ಅವರು ಸವಾಲು ಹಾಕಿದರು.

2018ರಲ್ಲಿ ನನ್ನ ನೇತೃತ್ವದ ಮೈತ್ರಿ ಸರಕಾರ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಆಗ ರಾಜ್ಯಪಾಲರ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆಯನ್ನು ಮಾಡಿತ್ತು. ಆದರೆ, ಮೊನ್ನೆ ನಡೆದ ಸಭೆಗೆ ಸ್ವತಃ ಮುಖ್ಯಮಂತ್ರಿಗಳ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯೇ ಅಧಿಕಾರಿಗಳಿಗೆ ಆದೇಶ ನೀಡಿದೆ. ತಪ್ಪು ತಪ್ಪೇ ಅಲ್ಲವೇ? ಇದನ್ನು ಒಪ್ಪಿಕೊಳ್ಳಲು ಪ್ರತಿಷ್ಠೆ ಏಕೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರಕಾರವೇ ನೇರ ಕಾರಣ:

ವಿಧಾನಸಭೆಯಲ್ಲಿ ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ. ಸಭಾಧ್ಯಕ್ಷರ ಪೀಠವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ನಿಮಿಷದಲ್ಲಿ ಬಗೆಹರಿಸುವ ವಿಷಯವನ್ನು ಇಷ್ಟು ದೂರ ಎಳೆದು ತರಲಾಗಿದೆ ಎಂದು ಅವರು ಹೇಳಿದರು.

ಸರಕಾರ ಗಂಭೀರ ಲೋಪ ಎಸಗಿದೆ. ಆಗಿರುವ ತಪ್ಪನ್ನು ಒಪ್ಪಿಕೊಳ್ಳುವುದು ಬಿಟ್ಟಿ ಭಂಡತನ ಪ್ರದರ್ಶನ ಮಾಡುತ್ತಿದೆ ಎಂದು ದೂರಿದರು.

ವಿಧಾನಸಭೆಯಲ್ಲಿ ನಡೆದಿರುವ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಘಟಬಂಧನ್ ಸಭೆಗೆ ಬಂದಿದ್ದ ಹೊರರಾಜ್ಯದ ಗಣ್ಯರಿಗೆ ಉಪಚಾರ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದ್ದು ತಪ್ಪು. ಈ ಸದನದಲ್ಲಿ ಪ್ರಸ್ತಾಪ ಮಾಡಿದ ಪ್ರತಿಪಕ್ಷಗಳ ಮನವಿಯ ಬಗ್ಗೆ ಸರಕಾರ ಭಂಡತನ ತೋರಿದೆ. ಸ್ವೀಕರ್ ಕಚೇರಿಯಲ್ಲಿ ಸಂಧಾನ ಸಭೆ ನಡೆಸಿದ ವೇಳೆಯಲ್ಲೂ ಕಾಂಗ್ರೆಸ್ ನಾಯಕರು, ನಾವೇನೂ ಎನು ತಪ್ಪು ಮಾಡಿಲ್ಲವೆಂದು ಪ್ರತಿಷ್ಠೆ ತೋರಿದರು ಎಂದರು ಮಾಜಿ ಮುಖ್ಯಮಂತ್ರಿಗಳು.

ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಪಕ್ಷಕ್ಕೆ ಸದನದಲ್ಲಿ ಹೇಗೆ ವರ್ತನೆ ಮಾಡಬೇಕು ಎಂಬುದೇ ಗೊತ್ತಿಲ್ಲ. ಅಜ್ಞಾನದಿಂದ ಸರ್ಕಾರ ನಡೆಸುತ್ತಿದ್ದಾರೆ. ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಇಷ್ಟೆಲ್ಲಾ ಮಾಡಿ, ಹಠಮಾರಿ ಧೋರಣೆಯಿಂದ ಈ ರೀತಿ ಸದನದಲ್ಲಿ ನಡೆದುಕೊಳ್ಳುವುದು ಎಷ್ಟು ಸರಿ? ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈಗ ಅಧಿಕಾರ ಇದೆ. ಮುಂದೆ ಅಧೋಗತಿಗೆ ಹೋಗುವ ಪರಿಸ್ಥಿತಿ ಬರಬಹುದು. ಎಚ್ಚರಿಕೆಯಿಂದ ಇರಿ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಶಾಸಕಾಂಗ ಸಭೆ:

ವಿವಿಧ ಬೆಳವಣಿಗೆಗಳ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ರಾಜ್ಯದಲ್ಲಿನ ಸದ್ಯದ ಬೆಳವಣಿಗೆಗಳು, ಮುಂದಿನ ಲೋಕಸಭೆ ಚುನಾವಣೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಶಾಸಕಾಂಗ ಪಕ್ಷದ ಉಪನಾಯಕಿ ಶಾರದಾ ಪೂರ್ಯನಾಯಕ್ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ