Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ವಿಶೇಷವಾಗಿ ಗುರುಪೂರ್ಣಿಮೆ

ಬೆಂಗಳೂರು,ಜು.3: ಜೆ.ಪಿ. ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ವಿಶೇಷವಾಗಿ ಗುರುಪೂರ್ಣಿಮೆ ಆಚರಿಸಲಾಗಿದ್ದು, ಶಿರಡಿ ಸಾಯಿ ಬಾಬಾರಿಗೆ ವಿಶೇಷ ಅಲಂಕಾರ, ವೈಭವದ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿತ್ತು.



‍ಶಿರಡಿ ಬಾಬಾರನ್ನು ೨೦ ಸಾವಿರ ತೆಂಗಿನಕಾಯಿ, ೨.೫೦೦ ಪರಂಗಿ, ಹಲಸಿನ ಹಣ್ಣು, ೫.೦೦೦ ಬೆಲ್ಲ, ೨೫,೦೦೦ ಕ್ಕೂ ಹೆಚ್ಚು ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಹಣ್ಣುಗಳು, ಅಸಂಖ್ಯಾತ ನವಧಾನ್ಯಗಳ ಮೂಲಕ ವಿಶೇಷ ಅಲಂಕಾರ ಮಾಡಲಾಗಿದ್ದು, ಗುರುಪೂರ್ಣಿಗೆ ಬಾಬಾ ಹಿಂದೆಂದಿಗಿಂತಲೂ ಈ ಬಾರಿ ವಿಶೇಷವಾಗಿ ಕಂಗೊಳಿಸುತ್ತಿದ್ದಾರೆ. ಕೆಂದು ಬಣ್ಣದ ಎಳನೀರಿನಿಂದಲೂ ವಿಶೇಷ ಅಲಂಕಾರ ಮಾಡಲಾಗಿದೆ ಎಂದು *ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮಮೋಹನ್‌ ರಾಜ್‌ ತಿಳಿಸಿದ್ದಾರೆ.

ಸಾಯಿ ಬಾಬಾ ಅವರಿಗೆ ಅಲಂಕಾರ ಮಾಡಿದ ಎಲ್ಲಾ ವಸ್ತುಗಳನ್ನು ಮರಳಿ ಭಕ್ತರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಹಣ್ಣಾದ ಪರಂಗಿ, ಹಲಸು ಮತ್ತಿತರ ಆಹಾರ ವಸ್ತುಗಳನ್ನು ಸ್ಥಳದಲ್ಲಿಯೇ ಭಕ್ತಾದಿಗಳಿಗೆ ಸಮರ್ಪಿಸಲಾಗುತ್ತಿದೆ. ಕಳೆದ ವರ್ಷ ಕ್ರೀಡಾ ಪರಿಕರಗಳಿಂದ ಬಾಬಾ ಅವರನ್ನು ಸಿಂಗರಿಸಲಾಗಿತ್ತು. ನಂತರ ೫೦೦ ಶಾಲೆಗಳಿಗೆ ಈ ವಸ್ತುಗಳನ್ನು ವಿತರಣೆ ಮಾಡಲಾಗಿತತು ಎಂದು ರಾಮಮೋಹನ್‌ ರಾಜ್‌ ತಿಳಿಸಿದರು.

ಗುರು ಪೂರ್ಣಿಮೆ ಅಂಗವಾಗಿ ಗುರು ಶಿರಡಿ ಬಾಬಾರಿಗೆ ಅಭಿಷೇಕ, ಹೋಮ, ಪ್ರಸಾದ ಸೇವೆ, ಅಲಂಕಾರ ಸೇವೆ, ಸರ್ವ ಸೇವೆ ಒಳಗೊಂಡಂತೆ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿದೆ. ಸೋಮವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಭಕ್ತರಿಗೆ ನಿರಂತರವಾಗಿ ಪ್ರಸಾದ ವಿತರಣೆ ಮಾಡಲಾಯಿತು ಎಂದು ತಿಳಿಸಿದರು.

ಪ್ರತಿವರ್ಷ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಅದ್ದೂರಿಯಾಗಿ ಗುರು ಪೂರ್ಣಿಮೆ ಆಚರಿಸುತ್ತಿದ್ದು, ಈ ಬಾರಿ ಮತ್ತಷ್ಟು ಸಂಭ್ರಮ ಮತ್ತು ವಿಶೇಷತೆಗಳೊಂದಿಗೆ ಸಾಯಿ ಬಾಬಾರ ಸ್ಮರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬಾಬಾರ ‘’ಸಬ್ ಕಾ ಮಾಲೀಕ್ ಏಕ್ ಹೇ’’ ಎಂಬ ಪರಿಕಲ್ಪನೆಯಡಿ ಬಡವ, ಬಲ್ಲಿದ ಬೇಧ-ಭಾವವಿಲ್ಲದೇ ಎಲ್ಲಾ ಸಮುದಾಯದವರಿಗೆ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ