Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೃಹತ್ ರೋಡ್‌ ಶೋ ಮೂಲಕ ನಾಮಪತ್ರ ಸಲ್ಲಿಸಿದ ಎಸ್‌.ಆರ್. ವಿಶ್ವನಾಥ್

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.20: ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಆರ್.ವಿಶ್ವನಾಥ್ ಅವರು ಬುಧವಾರ ಬೃಹತ್ ರೋಡ್ ಶೋ ನಡೆಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಕ್ಷೇತ್ರದ ಎಲ್ಲಾ ದಿಕ್ಕುಗಳಿಂದ ಬಿಜೆಪಿ ಧ್ವಜಗಳನ್ನು ಹಿಡಿದು ಪಕ್ಷ ಮತ್ತು ವಿಶ್ವನಾಥ್ ಪರ ಘೋಷಣೆಗಳನ್ನು ಕೂಗುತ್ತಾ ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಮತ್ತು ಬೆಂಬಲಿಗರು ವಿಶ್ವನಾಥ್ ಅವರ ನಾಮಪತ್ರ ಸಲ್ಲಿಕೆ ವೇಳೆ ಜಮಾಯಿಸಿದ್ದರು.

ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಶ್ವನಾಥ್, ಈ ಬಾರಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಿನ ಕಡೆಗೆ ಲಕ್ಷ್ಯ ಹರಿಸಿದ್ದೇವೆ. ಇಲ್ಲಿ ಸೇರಿರುವ ಕಾರ್ಯಕರ್ತರ ಉತ್ಸಾಹವನ್ನು ಗಮನಿಸಿದರೆ ಈ ಗುರಿಯನ್ನು ತಲುಪುತ್ತೇವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಇಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಕ್ಷೇತ್ರದ ಹೊರಗಿನಿಂದ ಬಂದವರಾಗಿದ್ದಾರೆ, ಅವರು ಸ್ಟಾರ್ ಪ್ರಚಾರಕರನ್ನು ಕರೆಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ನನಗೆ ನನ್ನ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಮತ್ತು ಅಸಂಖ್ಯಾತ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರಾಗಿದ್ದಾರೆ. ಅವರು ನಡೆಸುವ ಪ್ರಚಾರದಿಂದಲೇ ನನ್ನ ಗೆಲುವು ನಿಶ್ಚಿತ ಎಂದು ವಿಶ್ವನಾಥ್ ಹೇಳಿದರು.

ನನ್ನ ಬಗ್ಗೆ ಎದುರಾಳಿಗಳು ಯಾವುದೇ ರೀತಿಯಲ್ಲಿ ಅಪಪ್ರಚಾರ ಮಾಡಿದರೂ ನಾನು ಅವರಿಗೆ ಪ್ರತಿ ಹೇಳಿಕೆಯನ್ನು ನೀಡುವುದಿಲ್ಲ. ನಾನು ಕಳೆದ ಮೂರು ಬಾರಿ ಶಾಸಕನಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮಾಡಿರುವ ಕೆಲಸವನ್ನು ನೋಡಿ ಎಲ್ಲಾ ವರ್ಗದ ಮತದಾರರು ನನ್ನ ಬೆಂಬಲಕ್ಕೆ ನಿಲ್ಲಲಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕ್ಷೇತ್ರದ ಪ್ರತಿ ಗ್ರಾಮ, ಪ್ರತಿ ವಾರ್ಡ್ ನಿಂದಲೂ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು ಎಂದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಯಲಹಂಕ ಕ್ಷೇತ್ರದಲ್ಲಿ ಪ್ರಚಾರಕ್ಕೆ ಆಹ್ವಾನಿಸಲಾಗಿದೆ. ಈ ಬಗ್ಗೆ ಸದ್ಯದಲ್ಲೇ ಸಮಯ ನಿಗದಿ ಮಾಡಿ ತಿಳಿಸಲಿದ್ದಾರೆ ಎಂದು ವಿಶ್ವನಾಥ್ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ