Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ. 31 ಕ್ಕೆ ಶ್ರೀ ಸಿದ್ದರಾಮಾನಂದಪುರಿ ಶ್ರೀಗಳ ಪುಣ್ಯಾರಾಧನೆ, ನುಡಿನಮನ - ಕೆ.ವಿರುಪಾಕ್ಷಪ್ಪ

ಸುದ್ದಿಮೂಲ ವಾರ್ತೆ ರಾಯಚೂರು, ಜ.21:
ಕಲಬುರುಗಿ ಕನಕ ಗುರುಪೀಠದ ಶ್ರೀ ಸಿದ್ದರಾಮನಂದಪುರಿ ಸ್ವಾಾಮೀಜಿಯವರ ಶಿವೈಕ್ಯರಾದ ಹಿನ್ನೆೆಲೆಯಲ್ಲಿ ಜ.31ರಂದು ತಿಂಥಿಣಿ ಸೇತುವೆ ಬಳಿಯ ಶ್ರೀಮಠದಲ್ಲಿ ಪುಣ್ಯಾಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮ ಹಮ್ಮಿಿಕೊಳ್ಳಲಾಗಿದೆ ಎಂದು ಕನಕ ಗುರುಪೀಠದ ಟ್ರಸ್ಟಿಿ ಹಾಗೂ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಜ.15ರಂದು ಶಿವೈಕ್ಯರಾದ ಶ್ರೀ ಸಿದ್ದರಾಮಾನಂದಪುರಿ ಸ್ವಾಾಮೀಜಿಗಳ ಅಗಲಿಕೆ ಸಮಾಜಕ್ಕೆೆ ಅಪಾರ ನೋವುಂಟು ಮಾಡಿದೆ . ಹಾಲುಮತ ಸಮಾಜದ ಸಂಘಟನೆ, ಬೆಳವಣಿಗೆ ಹಾಗೂ ಅಪೂರ್ವ ಜ್ಞಾನಿಗಳಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದರು.
ಪುಣ್ಯಾಾರಾಧನೆ ಕಾರ್ಯಕ್ರಮಕ್ಕೆೆ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಾಮೀಜಿಗಳ ನೇತೃತ್ವದಲ್ಲಿ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಅನೇಕ ಮಠಾಧೀಶರು, ಸ್ವಾಾಮೀಜಿಗಳು, ಮುಖ್ಯಮಂತ್ರಿಿ ಸಿದ್ದರಾಮಯ್ಯಘಿ, ಸಚಿವರು, ಸಂಸದ, ಶಾಸಕರು ಭಾಗವಹಿಸಲಿದ್ದಾರೆ. ಭಕ್ತರು ಹಾಗೂ ಅನುಯಾಯಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ತಿಂಥಣಿ ಸೇತುವೆಯ ಮಠದಲ್ಲಿ ಅಂದು ಬೆಳಿಗ್ಗೆೆ 10ರಿಂದಲೆ ಪುಣ್ಯಾಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮ ಜರುಗಲು ವ್ಯವಸ್ಥೆೆ ಮಾಡಲಾಗುತ್ತಿಿದೆ. ಈಗಾಗಲೇ ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸಲಾಗಿದ್ದು, ಸುಮಾರು 250 ವಿದ್ಯಾಾರ್ಥಿಗಳು ಶಿಕ್ಷಣ ಪಡೆಯುತ್ತಿಿದ್ದಾರೆ. ಶ್ರೀ ಮಠದ ಕಾರ್ಯಚಟುವಟಿಕೆಗಳು ನಿರಂತರವಾಗಿ ಸಾಗುತ್ತಿಿವೆ. ಹೊಸ ಪೀಠಾಧಿಪತಿಗಳ ಆಯ್ಕೆೆ ಕುರಿತು ಟ್ರಸ್‌ಟ್‌ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸುದ್ದಿಗೋಷ್ಠಿಿಯಲ್ಲಿ ಸಮಾಜದ ಗೌರವಾಧ್ಯಕ್ಷ ಕೆ. ಬಸವಂತಪ್ಪ, ಪ್ರಘಿ.ಕಾರ್ಯದರ್ಶಿ ಹನುಮಂತಪ್ಪ ತುರುಕನಡೋಣಿ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ