Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ.17ರಂದು ರಾತ್ರಿ ಶ್ರೀಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ

ಸುದ್ದಿಮೂಲ ವಾರ್ತೆ

ಮಡಿಕೇರಿ, ಅ.15: ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಹಿನ್ನೆಲೆ ಶ್ರೀ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ಪವಿತ್ರ ಕ್ಷೇತ್ರದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾನುವಾರ ಭಾಗಮಂಡಲ ಭಗಂಡೇಶ್ವರ ದೇವಾಲಯ, ತ್ರಿವೇಣಿ ಸಂಗಮ ಹಾಗೆಯೇ ತಲಕಾವೇರಿ ಕೇತ್ರಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಭಾಗಮಂಡಲ ದೇವಾಲಯದಲ್ಲಿ ನಂದಾದೀಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಷಯ ಪಾತ್ರೆ ಇರಿಸಿದರು.

ನಂತರ ಭಾಗಮಂಡಲದ ಭಗಂಡೇಶ್ವರ, ಮಹಾಗಣಪತಿ, ಸುಬ್ರಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿ, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಾಂಸ್ಕೃತಿಕ ಗೀತಾ ಗಾಯನ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ, ಭಕ್ತಾಧಿಗಳ ಅನುಕೂಲಕ್ಕಾಗಿ ಬ್ಯಾರಿಕೇಡ್ ನಿರ್ಮಾಣ, ಅಗತ್ಯ ವ್ಯವಸ್ಥೆಗಳು ಮತ್ತಿತರ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ಹಾಗೆಯೇ ನಾಡಿನ ಜೀವನದಿ, ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧಿಸಿದಂತೆ ಸಿದ್ಧತೆ ಬಗ್ಗೆ ಹಲವು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಸಚಿವ ಎನ್.ಎಸ್.ಭೋಸರಾಜು, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಒಂದು ತಿಂಗಳಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ವಾಹನ ನಿಲುಗಡೆ, ಭಾಗಮಂಡಲದಿಂದ ತಲಕಾವೇರಿಯವರೆಗೆ, ತಲಕಾವೇರಿಯಿಂದ ಭಾಗಮಂಡಲದವರೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಅಗತ್ಯ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಹಿಂದಿನಂತೆ ಅನ್ನದಾನ ನಡೆಯಲಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಭಾಗಮಂಡಲದಿಂದ ತಲಕಾವೇರಿ ವರೆಗೆ ವಿದ್ಯುತ್ ದೀಪ, ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೈದ್ಯರು ಮತ್ತು ಶ್ರುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುವುದು ಎಂದು ಸಚಿವರು ಹೇಳಿದರು.

ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಪವಿತ್ರ ಸ್ಥಳದಲ್ಲಿ ಪ್ಲಾಸ್ಟಿಕ್‍ನ್ನು ಬಳಸಬಾರದು. ಸ್ವಪ್ರೇರಣೆಯಿಂದ ಭಕ್ತಾಧಿಗಳೇ ಪ್ಲಾಸ್ಟಿಕ್‍ನ್ನು ನಿಯಂತ್ರಿಸಬೇಕು. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಕೋರಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾಹಿತಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 2 ಡಿವೈಎಸ್‍ಪಿ, 9 ಪೊಲೀಸ್ ಇನ್ಸ್‍ಪೆಕ್ಟರ್, 15 ಸಬ್ ಇನ್ಸ್‍ಪೆಕ್ಟರ್‍ಗಳು, 30 ಮಂದಿ ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗಳು, 350 ಹೆಡ್‍ಕಾನ್ಸಟೇಬಲ್, ಅಗತ್ಯ ಪೊಲೀಸರು, ಜೊತೆಗೆ ಗೃಹ ರಕ್ಷಕದಳದವರು ಕರ್ತವ್ಯ ನಿರ್ವಹಿಸಲಿದ್ದು, ಅಗತ್ಯ ಬಂದೋ ಬಸ್ತ್ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ