Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಶಸ್ತಿಗಳಿಂದ ಜವಾಬ್ದಾರಿ ಹೆಚ್ಚಳ : ಶ್ರೀನಿವಾಸ್ 

ಸುದ್ದಿಮೂಲ ವಾರ್ತೆ

ಹೊಸಕೋಟೆ, ಅ. 10 : ಶಿಕ್ಷಕರಿಗೆ ಪ್ರಶಸ್ತಿಗಳು ಲಭಿಸಿದಂತೆಲ್ಲ ಅವರ ಜವಾಬ್ದಾರಿಗಳು ಹೆಚ್ಚಾಗುತ್ತವೆ ಎಂದು ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಶ್ರೀನಿವಾಸ್ ತಿಳಿಸಿದರು.

ಹೊಸಕೋಟೆ ತಾಲೂಕಿನ ಹಲಸಹಳ್ಳಿಯಲ್ಲಿ ಮುಗಬಾಳ ಕ್ಲಸ್ಟರ್ ನಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಮುಗಬಾಳ ಕ್ಲಸ್ಟರ್ ನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಲಕ್ಷ್ಮೀ ದೇವಿ ವೆಂಕಟರಮಣಪ್ಪ ರವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ , ವಿವಿಧ ಶಾಲೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಗೊಂಡ ಶಿಕ್ಷಕಿ ಮೈನಾರವರುಗೆ ಬೀಳ್ಕೊಡುಗೆ ಹಾಗೂ ನಿವೃತ್ತ ಸಿ ಆರ್ ಪಿ ಸುಗುಣಾಮಣಿ ಮುಗಬಾಳ ಕ್ಲಸ್ಟರ್ ನಿಂದ ಅಭಿನಂಧನೆ ಸಲ್ಲಿಸಿದ್ದು ಪ್ರಶಸ್ತಿ ಪಡೆದವರು ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲಿ ಹಾಗೂ ನಿವೃತ್ತರ ವಿಶ್ರಾಂತ ಜೀವನ ಸುಖಮಯವಾಗಿರಲಿ ಎಂದರು.

ನಂತರ ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿ, ಪ್ರಶಸ್ತಿ ಪಡೆದವರು ಮಾತ್ರ ಅತ್ಯುತ್ತಮ ಶಿಕ್ಷಕರಲ್ಲಿ ಎಲ್ಲರೂ ಸಹ ವಿದ್ಯಾರ್ಥಿಗಳ ಪೋಷಕರ ಗ್ರಾಮಸ್ಥರ ನೆಚ್ಚಿನ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮನದಾಳದಲ್ಲಿ ಉಳಿಯುವ ಶಿಕ್ಷಕ ಪ್ರಶಸ್ತಿಯನ್ನು ಗಳಿಸಿಕೊಳ್ಳಬೇಕು ಎಂದರು.

ಈ ಸಂಧರ್ಭದಲ್ಲಿ ತಾಲೂಕು ಪ್ರಾರ್ಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಲ್ಲಾಭಕಾಶ್, ಗೌರವಾಧ್ಯಕ್ಷ ಸುಬ್ಬರಾಯಪ್ಪ ಕಾರ್ಯದರ್ಶಿ ಅಣ್ಣಯ್ಯಪ್ಪ ಶಿಕ್ಷಣ ಸಂಯೋಜಕ ರವಿಕುಮಾರ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ