Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದ ರಾಜ್ಯದ ನಿಯೋಗ ದಾವೋಸ್‌ಗೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.18:
ಸ್ವಿಿಟ್ಜರ್ಲೆಂಡ್‌ನ ದಾವೋಸ್ - ಕ್ಲೋೋಸ್ಟರ್ಸ್‌ನಲ್ಲಿ ಇದೇ 19 ರಿಂದ 23ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎ್) ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಪ್ರಯಾಣ ಬೆಳೆಸಿದೆ.
ಈ ಭೇಟಿ ಸಂದರ್ಭದಲ್ಲಿ ಹೂಡಿಕೆದಾರರು ತ್ವರಿತವಾಗಿ ನಿರ್ಧಾರಕ್ಕೆೆ ಬರುವುದಕ್ಕೆೆ ನೆರವಾಗಲು ಹಾಗೂ ಯೋಜನೆಗಳನ್ನು ಶೀಘ್ರವಾಗಿ ಕಾರ್ಯಾರಂಭ ಮಾಡಲು ಉತ್ತೇಜನ ನೀಡುವ ಸ್ಪಷ್ಟ ಉದ್ದೇಶದಿಂದ ನಾಲ್ಕು ದಿನಗಳ ಕಾಲ 45ಕ್ಕೂ ಹೆಚ್ಚು ದ್ವಿಿಪಕ್ಷೀಯ ಸಭೆಗಳು, ದುಂಡುಮೇಜಿನ ಸಮಾಲೋಚನೆಗಳಲ್ಲಿ ಭಾಗವಹಿಸಲಿದ್ದಾರೆ.
ತಯಾರಿಕೆ, ನವೀಕರಿಸಬಹುದಾದ ಇಂಧನ ಮೂಲಗಳು, ಎಲೆಕ್ಟ್ರಾಾನಿಕ್‌ಸ್‌/ಇಎಸ್‌ಡಿಎಂ, ಡೇಟಾ ಸೆಂಟರ್‌ಗಳು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ) ಸ್ಥಾಾಪನೆ ಸಂಬಂಧ ಜಾಗತಿಕ ಹೂಡಿಕೆದಾರರು ಹಾಗೂ ಉದ್ಯಮ ದಿಗ್ಗಜರ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಪಾಟೀಲ ತಿಳಿಸಿದ್ದಾರೆ.
ಬಹುರಾಷ್ಟ್ರೀಯ ಪ್ರಮುಖ ಕಂಪನಿಗಳಾದ ಅಮೆಜಾನ್ ವೆಬ್ ಸರ್ವೀಸಸ್, ಲೆನೊವೊ, ವ್ಟ್‌ಾ ಸ್ಪೇಸ್, ಕೋಕಾ-ಕೋಲಾ, ಫಿಲಿಪ್ ಮಾರಿಸ್, ಇಂಪೀರಿಯಲ್ ಕಾಲೇಜ್ ಲಂಡನ್, ಸಿಂಗಪುರ ಆರ್ಥಿಕ ಅಭಿವೃದ್ಧಿಿ ಮಂಡಳಿ ಜೊತೆ ರಾಜ್ಯದ ನಿಯೋಗವು ಮಾತುಕತೆ ನಡೆಸಲಿದೆ.
ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳ ಸ್ಥಾಾಪನೆ - ವಿಸ್ತರಣೆಗೆ ರಾಜ್ಯದಲ್ಲಿ ಇರುವ ವಿಪುಲ ಅವಕಾಶಗಳು ಹಾಗೂ ಸೌಲಭ್ಯಗಳನ್ನು ಜಾಗತಿಕ ಹೂಡಿಕೆದಾರರಿಗೆ ನಿಯೋಗವು ಮನದಟ್ಟು ಮಾಡಿಕೊಡಲಿದೆ. ಹೂಡಿಕೆ ನಿರ್ಧಾರಗಳನ್ನು ಅನುಷ್ಠಾಾನಕ್ಕೆೆ ಪರಿವರ್ತಿಸುವುದು, ಕೈಗಾರಿಕೆಗಳ ಸ್ಥಾಾಪನೆಗೆ ಸನ್ನದ್ಧ ಸ್ಥಿಿತಿಯಲ್ಲಿ ಇರುವ ಭೂಮಿ, ಶಾಸನಬದ್ಧ ಅನುಮೋದನೆಗಳು, ಮೂಲಸೌಕರ್ಯಗಳ ಲಭ್ಯತೆ, ವಿವಿಧ ವಲಯಗಳ ಅಗತ್ಯ ಈಡೇರಿಸುವ ನಿರ್ದಿಷ್ಟ ಮೂಲಸೌಕರ್ಯಗಳು, ಪೂರೈಕೆ ಸರಪಳಿ ಸಂಪರ್ಕಗಳು, ಪರಿಣತ ಮಾನವ ಸಂಪನ್ಮೂಲದ ಲಭ್ಯತೆ ಹಾಗೂ ಉತ್ತೇಜನಗಳ ಬಗ್ಗೆೆ ಚರ್ಚೆ ಕೇಂದ್ರೀಕೃತಗೊಂಡಿರಲಿದೆ. ವಾಸ್ತವ ಹೂಡಿಕೆಗಳು ಮತ್ತು ಅದರ ಪರಿವರ್ತನೆಗೆ ರಾಜ್ಯ ಸರ್ಕಾರವು ಆದ್ಯತೆ ನೀಡಲಿದೆ ಎಂದು ಅವರು ವಿವರಿಸಿದ್ದಾರೆ.
ಕರ್ನಾಟಕದ ಪ್ರವರ್ಧಮಾನಕ್ಕೆೆ ಬರುತ್ತಿಿರುವ ಕೈಗಾರಿಕಾ ಅನುಕೂಲತೆಗಳಿಗೆ ಸಂಬಂಧಿಸಿದಂತೆ ಜಾಗತಿಕ ಹೂಡಿಕೆದಾರರನ್ನು ರಾಜ್ಯದತ್ತ ಆಕರ್ಷಿಸಲು ಪ್ರತ್ಯೇಕ ಅಧಿವೇಶನ ಆಯೋಜಿಸಲಾಗುವುದು. ಹೂಡಿಕೆಗೆ ಯೋಗ್ಯವಾಗಿರುವ ಅವಕಾಶಗಳು, ಕೈಗಾರಿಕೆಗಳನ್ನು ತ್ವರಿತವಾಗಿ ಕಾರ್ಯಾರಂಭ ಮಾಡಲು ನೆರವಾಗಲಿರುವ ರಾಜ್ಯದ ಸಾಮರ್ಥ್ಯದ ಬಗ್ಗೆೆ ವಿವರಗಳನ್ನು ಹಂಚಿಕೊಳ್ಳಲಾಗುವುದು. ಜಾಗತಿಕ ಹೂಡಿಕೆದಾರರ ಪಾಲಿಗೆ ಕರ್ನಾಟಕವು ಅನುಷ್ಠಾಾನ ಕೇಂದ್ರಿಿತ ಗಮ್ಯಸ್ಥಾಾನ ಆಗಿರುವುದನ್ನೂ ಇದು ಮನದಟ್ಟು ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಗರಾಭಿವೃದ್ಧಿಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬಿಡಿಎ ಆಯುಕ್ತ ಮಣಿವಣ್ಣನ್, ಕೈಗಾರಿಕಾ ಇಲಾಖೆ ಆಯುಕ್ತೆೆ ಗುಂಜನ್ ಕೃಷ್ಣ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ನಿಯೋಗದಲ್ಲಿ ತೆರಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ