Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ.27 ರಿಂದ 29ರವರೆಗೆ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

ಸುದ್ದಿಮೂಲ ವಾರ್ತೆ

ತುಮಕೂರು, ಅ.25 : ಇದೇ 27, 28 ಮತ್ತು 29 ರಂದು ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಅ. 27ರ ಸಂಜೆ 4.30ಕ್ಕೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಕ್ರೀಡಾಜ್ಯೋತಿ ಸ್ವೀಕರಿಸುವರು. ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸುವರು. ತುಮಕೂರು ನಗರ ವಿಧಾನಸಭಾ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.

ವಿವಿಧ ಜಿಲ್ಲೆಗಳಿಂದ ಆಗಮಿಸುವ ನೌಕರರ ನೋಂದಣಿಯನ್ನು ಅ. 27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಮಾಡಿಕೊಳ್ಳಲಾಗುವುದು.

ಅಂದು ಸಂಜೆ 4.30 ಗಂಟೆಗೆ ಧ್ವಜಾರೋಹಣ, ಜಿಲ್ಲಾವಾರು ಪಥಸಂಚಲನ, ಮುಖ್ಯಮಂತ್ರಿಗಳಿಂದ ಗೌರವ ವಂದನೆ ಸ್ವೀಕಾರ ಮತ್ತು ಬಲೂನ್ ಹಾರಿಸುವ ಮೂಲಕ ಕ್ರೀಡಾಕೂಟ ಉದ್ಘಾಟನೆ, ಕ್ರೀಡಾ ಜ್ಯೋತಿ ಸ್ವೀಕಾರ, ನಂತರ ಮುಖ್ಯಮಂತ್ರಿಗಳಿಂದ ಹಾಗೂ ಗಣ್ಯರಿಂದ ಭಾಷಣ, ಈಗಾಗಲೇ ಆಯಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ 3500 ಮಹಿಳಾ ನೌಕರರು ಮತ್ತು 6500 ಪುರುಷ ನೌಕರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾಗುವ ಪ್ರಥಮ, ದ್ವಿತೀಯ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಭಾಗವಹಿಸಿದ ಎಲ್ಲಾ ನೌಕರರಿಗೂ ಮೂರು ದಿನಗಳ ಕಾಲ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸುವ ಪುರುಷ ಮತ್ತು ಮಹಿಳಾ ನೌಕರರಿಗೆ ಪ್ರತ್ಯೇಕವಾಗಿ ವಸತಿ

ವ್ವಸ್ಥೆಯನ್ನು ಕಲ್ಪಿಸಲಾಗಿದೆ. ತುಮಕೂರು ನಗರದಲ್ಲಿರುವ ಆಯ್ದ ಕ್ರೀಡಾಂಗಣಗಳಲ್ಲಿ ವಿವಿಧ ಕ್ರೀಡೆಗಳನ್ನು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ವಸತಿ ಹಾಗೂ ಕ್ರೀಡೆಗಳು ನಡೆಯುವ ಸ್ಥಳಗಳಿಗೆ ಮಹಾತ್ಮಾ ಗಾಂಧಿ ಕ್ರೀಡಾಂಗಣದಿಂದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಅ. 27ರ ಸಂಜೆ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ ಸಂಜೆ 7 ಗಂಟೆಗೆ ಕನ್ನಡದ ಗಾಯಕ ಹೇಮಂತ್, ಇಂದು ನಾಗರಾಜ್, ಕಂಬದ ರಂಗಯ್ಯ ಸರಿಗಮಪ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ, ಅ. 28ರ ಸಂಜೆ 7 ಗಂಟೆಗೆ ಜಾನಪದೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಈ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳು, ಅಥ್ಲೆಟ್ಲಿಕ್ಸ್ ಸೇರಿದಂತೆ ಗುಂಪು ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳೂ ಸಹ ನಡೆಯಲಿವೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಅ. 27 ರಿಂದ 29ರವರೆಗೆ ಸರ್ಕಾರ ವಿಶೇಷ ಸಾಂದರ್ಭಿಕ ರಜೆ ನೀಡಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ