Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲೆಸೆತ: ತಲೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲು

ಸುದ್ದಿಮೂಲ ವಾರ್ತೆ
ತುಮಕೂರು, ಏ.29: ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಪ್ರಚಾರ ನಡೆಸುತ್ತಿದ್ದ ವೇಳೆ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ತಲೆಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಲೂಕಿನ ಭೈರೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಪ್ರಚಾರದ ವೇಳೆಯಲ್ಲಿ  ಡಾ. ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಡಾ. ಪರಮೇಶ್ವರ್ ಅವರು ಇತ್ತೀಚೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿಯೂ ಕಲ್ಲು ತೂರಾಟ ಮಾಡಲಾಗಿತ್ತು. ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದರು. ಕೊರಟಗೆರೆ ತಾಲೂಕಿನ ರೆಡ್ಡಿಹಳ್ಳಿ ವೆಂಕಟಾಪುರ ಗ್ರಾಮದ ರಂಗಧಾಮಯ್ಯ ಬಂಧಿತ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಘಟನೆಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಗಾಯಗೊಂಡಿದ್ದರು.

ಈಗ ಮತ್ತೆ ಪರಮೇಶ್ವರ್‌ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಅವರ ಮೇಲೆ ಆಗಿರುವ ಎರಡನೇ ದಾಳಿ ಇದಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ