Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಲಯಮಟ್ಟದ ಕ್ರೀಡಾಕೂಟ-ತಾಲೂಕು ಮಟ್ಟಕ್ಕೆ ಆಯ್ಕೆಯಾದ ಶಹಪುರ ಗ್ರಾಮದ ವಿದ್ಯಾರ್ಥಿಗಳು

ಸುದ್ದಿಮೂಲವಾರ್ತೆ

ಕೊಪ್ಪಳ ಆ 19: ಮುನಿರಾಬಾದ್ ವಲಯಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಜರುಗಿದ್ದು, ಶಹಪುರ ಗ್ರಾಮದ ವಿದ್ಯಾರ್ಥಿಗಳು ಕಬಡ್ಡಿ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಈ ವಲಯಮಟ್ಟದ ಕ್ರೀಡಾಕೂಟದಲ್ಲಿ ಒಟ್ಟು 12 ಶಾಲೆಗಳು ಭಾಗವಹಿಸಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಟಿಎಚ್ ಶಂಕ್ರಯ್ಯ ಉದ್ಘಾಟಿಸಿದರು. ಮಕ್ಕಳ ದೈಹಿಕ ಕ್ಷಮತೆ ಬಗ್ಗೆ ಸಂತಸ ವ್ಯಕ್ತಪಡಿಸಿ,

ದೈಹಿಕ ಶಿಕ್ಷಣ ಶಿಕ್ಷಕರು ಈ ಕ್ರೀಡಾಕೂಟದ ನೇತೃತ್ವ ವಹಿಸಿದ್ದು, ಬಾಲಕರ ಮತ್ತು ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾವಳಿಯಲ್ಲಿ ಶಹಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗುಂಡು ಎಸೆತದಲ್ಲಿ ಶಹಪುರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಾಗರಾಜ ಚಳ್ಳಾರಿ ಪ್ರಥಮ ಸ್ಥಾನ ಗಿಟ್ಟಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಹಿಟ್ನಾಳ, ಹುಲಿಗಿ, ಶಹಪುರ, ಹೊಸಹಳ್ಳಿ, ಬೇವಿನಹಳ್ಳಿ, ಕಂಪಸಾಗರ, ಹೊಸ ಲಿಂಗಾಪುರ, ಮುನಿರಾಬಾದ್ ಸರ್ಕಾರಿ ಪ್ರಾಥಮಿಕ ಶಾಲೆಗಳಿಂದ 12 ತಂಡಗಳು ಭಾಗವಹಿಸಿದ್ದವು. ಗುಂಡು ಎಸೆತ ಸ್ಪರ್ಧೆಯಲ್ಲಿ 24 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಹಪುರ ಗ್ರಾಮದ ವಿದ್ಯಾರ್ಥಿಗಳಿಗೆ ಖ್ಯಾತ ಕಬ್ಬಡ್ಡಿ ಕ್ರೀಡಾಪಟು ಬಸವರಾಜ ಕೊರವರ ಮತ್ತು ಪ್ರಕಾಶ್ ಬೆಣಕಲ್ ಅವರು ತರಬೇತಿ ನೀಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ