Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶುಲ್ಕ ಹೆಚ್ಚಳ, ಮೂಲ ಸೌಕರ್ಯಗಳ ಕೊರತೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಮೈಸೂರು,ಜೂ.26: ಶಾಲಾ, ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ, ಮೂಲಭೂತ ಸೌಕರ್ಯ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಈಡೇರಿಕೆಗಾಗಿ ಸೋಮವಾರ ವಿದ್ಯಾರ್ಥಿಗಳು ಎಐಡಿಎಸ್ಓ ಸಂಘಟನೆಯ ಆಶ್ರಯದಲ್ಲಿ ನಗರದ ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದ ಬಳಿ ಪ್ರತಿಭಟನೆ ನಡೆಸಿದರು.

ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜುಗಳಲ್ಲಿ ಈ ವರ್ಷದ ಪ್ರವೇಶಾತಿ ಸಂಖ್ಯೆಯು ಕುಸಿದಿದೆ‌‌. ಈ ಪರಿಸ್ಥಿತಿಗೆ 2020 ರಲ್ಲಿ ಕಳೆದ ಸರ್ಕಾರ ತಂದ ಹೊಸ ಶಿಕ್ಷಣ ನೀತಿ ರಾಷ್ಟ್ರೀಯ ಶಿಕ್ಷಣ ನೀತಿ (ಎಇಪಿ-2020) ಧಿಡೀರ್ ಹೇರಿಕೆಯೇ ಪ್ರಮುಖ ಕಾರಣವೆಂದು ಆರೋಪ ಮಾಡಿದರು.

ಈ ವೇಳೆ ಮಾತನಾಡಿದ ಎಐಡಿಎಸ್ಓ ಜಿಲ್ಲಾಧ್ಯಕ್ಷ ಸುಭಾಷ್, ಶೈಕ್ಷಣಿಕ ಕೇಂದ್ರ ಎಂದು ಪ್ರಸಿದ್ಧಿ ಪಡೆದಿರುವ ಮೈಸೂರು ಸಹ ಸಮಸ್ಯೆಗಳಿಂದ ಹೊರತಾಗಿಲ್ಲ. ಸರ್ಕಾರಿ ಕಾಲೇಜುಗಳಲ್ಲಿನ ಶುಲ್ಕ ಏರಿಕೆ, ಸರ್ಕಾರಿ ಸಂಸ್ಥೆಗಳನ್ನು ಸ್ವಾಯತ್ತ ಸಂಸ್ಥೆಗಳನ್ನಾಗಿ ಮಾಡುತ್ತಿರುವುದು ಎನ್.ಇ‌.ಪಿಯ ಒಂದು ಭಾಗವಾಗಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದಿಂದಲೇ ದೂರ ಉಳಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಖಂಡಿಸಿದರು.

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಿದ್ಯಾರ್ಥಿ ವೇತನ,ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೂಕ್ತ ಬಸ್ ಹಾಗೂ ಹಾಸ್ಟೆಲ್ ಸೌಲಭ್ಯವಿಲ್ಲದಿರುವುದು, ಸಮರ್ಪಕವಾಗಿ ತರಗತಿಗಳನ್ನು ನಡೆಸಲು ಶಿಕ್ಷಕರ ಕೊರತೆ ಇವೆಲ್ಲವೂ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ತಿಲಾಂಜಲಿ ಇಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಪರಿಸ್ಥಿತಿಯಿಂದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವನ್ನು ಹಸನಾಗಿಸುವ ತುರ್ತು ಅವಶ್ಯಕತೆಯಿದೆ‌‌. ಹಾಗಾಗಿ ಸರ್ಕಾರವು ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಕಾರ್ಯದರ್ಶಿ ಮಂಡಳಿ ಸದಸ್ಯರಾದ, ನಿತಿನ್, ಸ್ವಾತಿ ಚಂದ್ರಿಕಾ ,ಚಂದನ ,ಹೇಮಾ ಹಾಗೂ ಸಮಿತಿಯ ಸದಸ್ಯರುಗಳಾದ ಧನುಶ್ರಿ, ಅಂಜಲಿ ಶ್ರೇಯಸ್, ಜಟ್ಟಪ್ಪ, ದಿಶಾ ಹಾಗೂ ಮಹಾರಾಜ ಹಾಗೂ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ