Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೊರೂರು ಅವರ ಆದರ್ಶ ಜೀವನವನ್ನು ವಿದ್ಯಾರ್ಥಿಗಳು ಪಾಲಿಸಬೇಕು : ಡಾ. ವೂಡೇ ಪಿ. ಕೃಷ್ಣ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು. 31 : ಗೊರೂರು ಅವರು ಗಾಂಧೀಜಿಯವರ ಸರಳ ಜೀವನವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಆದರ್ಶವನ್ನು ಪಾಲಿಸಿದ್ದರು. ವಿದ್ಯಾರ್ಥಿಗಳು ಗೊರೂರು ಅವರ ಪುಸ್ತಕಗಳನ್ನು ಓದುವ ಮೂಲಕ ಅವರ ಆದರ್ಶ ಜೀವನವನ್ನು ಪಾಲಿಸಬೇಕು ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ಡಾ. ವೂಡೇ ಪಿ. ಕೃಷ್ಣ ಎಂದು ತಿಳಿಸಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ ಯುವ ಸಬಲೀಕರಣ ಇಲಾಖೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ 119ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ಡಾ. ವೂಡೇ ಪಿ. ಕೃಷ್ಣ ಉದ್ಘಾಟಿಸಿ ಮಾತನಾಡುತ್ತಾ, ಗಾಂಧೀಜಿಯವರ ದೇಶಪ್ರೇಮ, ಸತ್ಯ, ಧರ್ಮ, ಅಹಿಂಸೆ ಮುಂತಾದ ಆದರ್ಶಗಳನ್ನು ಗೊರೂರು ಅವರು ಜೀವನದಲ್ಲಿ ಅಳವಡಿಸಿಕೊಂಡಿದ್ದರು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಕೋಶಾಧ್ಯಕ್ಷರಾದ ಹೆಚ್.ಬಿ. ದಿನೇಶ್ ಅವರು ಗೊರೂರರ ದತ್ತಿಯನ್ನು ಉದ್ಘಾಟಿಸಿ ಮಾತನಾಡಿ, ಗಾಂಧೀಜಿಯವರ ಆತ್ಮಕಥೆಯನ್ನು ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಿದ ಕೀರ್ತಿ ಅವರದ್ದು. ಆದ್ದರಿಂದ ನಾವು ಚಿಕ್ಕಂದಿನಿಂದಲೇ ಗಾಂಧೀಜಿಯವರ ಜೀವನ ತತ್ವವನ್ನು ತಿಳಿಯಲು ಸಾಧ್ಯವಾಯಿತು ಎಂದು ತಿಳಿಸಿದರು.

ಸಾಹಿತಿಗಳು ಹಾಗೂ ಚಿಂತಕರಾದ ನಾಡೋಜ ಹಂಪಾ ನಾಗರಾಜಯ್ಯ ಅವರು ಮಾತನಾಡಿ ಗೊರೂರು ಅವರು ಸಜ್ಜನರಾಗಿದ್ದು, ಹಾಸ್ಯ ಪ್ರವೃತ್ತಿ ಹೊಂದಿದ್ದವರಾಗಿದ್ದರು. ನಾನು ಕರ್ನಾಟಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿದ್ದಾಗ ಗೊರೂರು ಅವರ ಜೊತೆ ಕನಿಷ್ಠ 20 ಜೆಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದೆ. ಪ್ರವಾಸದ ಸಂದರ್ಭದಲ್ಲಿ ಅವರು ಸ್ವ ಅನುಭವನ್ನು ಹಂಚಿಕೊಂಡಿದ್ದರು. ಅವರ ಮಾತಿನ ಮಾಧುರ್ಯದಿಂದ ಪ್ರವಾಸದ ಆಯಾಸ ತಿಳಿಯುತ್ತಿರಲಿಲ್ಲ ಎಂದರು.

ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಮಲ್ಲೇಪುರಂ ಜಿ. ವೆಂಕಟೇಶ ಅವರು ಮಾತನಾಡಿ, ಗೊರೂರು ಅವರು ಚಿಕ್ಕವರು, ದೊಡ್ಡವರು, ಸಮಕಾಲೀನರನ್ನು ತುಂಬು ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ತಮ್ಮನ್ನು ತಾವೇ ಹಾಸ್ಯ ಮಾಡಿಕೊಳ್ಳುತ್ತಿದ್ದರು. ಎಲ್ಲರನ್ನೂ ನಗಿಸುವ ಗುಣ ಹೊಂದಿದ್ದರು. ಅವರ ಬರವಣಿಗೆಯು ರಸಭರತೆಯಿಂದ ಕೂಡಿರುತ್ತಿತ್ತು. ಗಾಂಧಿಜಿಯವರ ಸರಳ ಜೀವನವನ್ನು ಅಳವಡಿಸಿ ಅದನ್ನೇ ಪರಿಪಾಠವಾಗಿಸಿಕೊಂಡಿದ್ದರು ಎಂದರು.

ಇದೇ ಸಂದರ್ಭದಲ್ಲಿ ಸಾಹಿತಿಗಳು ಹಾಗೂ ಚಿಂತಕರಾದ ನಾಡೋಜ ಹಂಪಾ ನಾಗರಾಜಯ್ಯ ಅವರು “ಗೊರೂರಿನ ಸತ್ಯಾನ್ವೇಷಕ ರಾಮಸ್ವಾಮಿ ಅಯ್ಯಂಗಾರ್” ಮತ್ತು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ, ಮಲ್ಲೇಪುರಂ ಜಿ. ವೆಂಕಟೇಶ ಅವರು “ ಹೇಮಾವತಿಯ ತೀರದಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್” ಎಂಬ ಕೃತಿ ಲೋಕಾರ್ಪಣೆ ಮಾಡಿದರು.

ಪ್ರಾಧ್ಯಾಪಕರು ಮತ್ತು ಸಾಹಿತಿಗಳಾದ ಡಾ. ಕಮಲ ನರಸಿಂಹ ಅವರಿಗೆÀ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷರಾದ ಡಾ.ಎಸ್.ಜಿ. ಸುಶೀಲಮ್ಮ ಅವರು ಗೊರೂರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಕಾರ್ಯದರ್ಶಿ ಶ್ರೀಮತಿ ಇಂದಿರಾ ಕೃಷ್ಣಪ್ಪ ಅವರು ಮಾತನಾಡಿದರು. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಸುಪುತ್ರಿ ಶ್ರೀಮತಿ ವಸಂತಿ ಮೂರ್ತಿ ಗೊರೂರು, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸದಸ್ಯರಾದ ಎನ್.ಆರ್.ವಿಶುಕುಮಾರ್ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ