Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸಲು ರಾಹುಲ್ ಗಾಂಧಿ ಪ್ರಯತ್ನ:ಸುಧಾಂಶು ತ್ರಿವೇದಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.17: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಸುಳ್ಳು ಭರಸವೆಗಳನ್ನು ನೀಡಿ, ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದು, ಪ್ರಜ್ಞಾವಂತ ನಾಡಿನ ಜನರಿಗೆ ಕಾಂಗ್ರೆಸ್ ಏನೆಂಬುದರ ಬಗ್ಗೆ ಅರಿವಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ ಹೇಳಿದರು.

ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಕರ್ನಾಟಕ ಚುನಾವಣಾ ಸಂದರ್ಭದಲ್ಲಿ ಮತ್ತೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ, ಛತ್ತೀಸ್‍ಗಢದಲ್ಲಿ ಅಧಿಕಾರಕ್ಕೆ ಬಂದ ಹತ್ತೇ ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಐದು ವರ್ಷವಾದರೂ ಈ ಆಶ್ವಾಸನೆ ಈಡೇರಿಲ್ಲ ಎಂದು ಟೀಕಿಸಿದರು.

ರಾಜಸ್ಥಾನದಲ್ಲಿ ಚುನಾವಣೆಗೂ ಮುಂಚೆ ನಿರುದ್ಯೋಗಿಗಳಿಗೆ ಮಾಸಿಕ 5 ಸಾವಿರ ರೂಪಾಯಿ ನೀಡುವುದಾಗಿ ಇದೇ ಕಾಂಗ್ರೆಸ್ ಭರವಸೆ ನೀಡಿತ್ತು. ಅದೂ ಈಡೇರಿಲ್ಲ. ಇನ್ನು ಹಿಮಾಚಲ ಪ್ರದೇಶದಲ್ಲಿ ಪೆಟ್ರೋಲ್ ಉತ್ಪನ್ನಗಳ ದರಗಳನ್ನು ಇಳಿಸುವುದಾಗಿ ಭರವಸೆ ನೀಡಿತ್ತು. ಆದರೆ, ಅಲ್ಲಿ ದರ ಇಳಿಕೆ ಬದಲು ಪೆಟ್ರೋಲ್ ಲೀಟರ್‍ಗೆ 3 ರೂ. ಏರಿಕೆಯಾಗಿದೆ. ಹೀಗೆ ಚುನಾವಣೆ ವೇಳೆ ಪೊಳ್ಳು ಭರವಸೆಗಳನ್ನು ನೀಡಿ, ಜನರನ್ನು ದಾರಿ ತಪ್ಪಿಸಿ ಅಧಿಕಾರಕ್ಕೇರುವ ಆಸೆ ಕಾಂಗ್ರೆಸ್ ಹೊಂದಿದೆ. ಆದರೆ, ಕರ್ನಾಟಕದ ಜನತೆಗೆ ಮತ್ತು ಹೆಚ್ಚಿನ ಸಂಖ್ಯೆಯ ವಿದ್ಯಾವಂತರಿರುವ ಬೆಂಗಳೂರು ಜನತೆಗೆ ಇದೆಲ್ಲದರ ಬಗ್ಗೆ ಅರಿವಿದೆ ಎಂದು ಹೇಳಿದರು.

ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ‘ಸಬ್- ಕ- ಸಾತ್, ಸಬ್-ಕ-ವಿಶ್ವಾಸ್, ಸಬ್-ಕ- ವಿಕಾಸ್’ ಮೇಲೆ ವಿಶ್ವಾಸವಿಟ್ಟು ಎಲ್ಲರನ್ನೂ ಜೊತೆಯಾಗಿ ಕೊಂಡೊಯ್ಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ರಾಹುಲ್ ಗಾಂಧಿ ಜನಿಸಿದಾಗಿನಿಂದ ಅಂದರೆ 52 ವರ್ಷಗಳಿಂದ ಕಾಂಗ್ರೆಸ್ ಎಷ್ಟು ಲಿಂಗಾಯತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ ಎಂಬುದನ್ನು ಅವರೇ ಹೇಳಬೇಕು ಎಂದು ಪ್ರಶ್ನಿಸಿದರು.

ಈ ಅವಧಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ವಿರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಅವಧಿಗೆ ಮುನ್ನವೇ ಕೆಳಗಿಳಿಸಲಾಯಿತು. ಇನ್ನು, ನಿಜಲಿಂಗಪ್ಪನವರನ್ನು ಅಂದು ಅಧಿಕಾರದಲ್ಲಿದ್ದ ಇಂದಿರಾಗಾಂಧಿಯೇ ಸೋಲಿಸಿದ್ದರು. ಆದರೆ, ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ನಾಲ್ವರು ಮುಖ್ಯಮಂತ್ರಿಗಳ ಪೈಕಿ ಮೂರು ಮುಖ್ಯಮಂತ್ರಿಗಳು ಲಿಂಗಾಯತ ಸಮುದಾಯಕ್ಕೆ ಸೇರಿದವರೇ ಆಗಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಯಾವ ಸ್ಥಾನ ನೀಡುತ್ತದೆ ಎಂಬುದನ್ನು ಆ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಬೇಕು ಎಂದು ಸುಧಾಂಶು ತ್ರಿವೇದಿ ಆಗ್ರಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ