Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದುವೆಯಾದ ಐದೇ ದಿನಕ್ಕೆ ಆತ್ಮಹತ್ಯೆ

ಸುದ್ದಿಮೂಲ ವಾರ್ತೆ

ಮೈಸೂರು,ಜೂ.12: ಮದುವೆಯಾದ ಐದೇ ದಿನಕ್ಕೆ ಕೊಳ್ಳೇಗಾಲ ನಗರದ ಜಿ.ಪಿ.ಮಲ್ಲಪ್ಪಪುರಂ ನಿವಾಸಿ ಸತೀಶ್‌ ಬಾಬು (43) ಎಂಬುವವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಾವಿನ ಬಗ್ಗೆ ಅನುಮಾನವಿದೆ ಎಂದು ಹೇಳಿರುವ ಅವರ ಪತ್ನಿ, ಸತೀಶ್‌ ತಂದೆ, ತಾಯಿ ಮತ್ತು ಸಂಬಂಧಿಕರ ವಿರುದ್ಧ ನಗರ ಠಾಣೆಗೆ ದೂರು ನೀಡಿದ್ದಾರೆ.

ಸತೀಶ್‌ ಬಾಬು ಅವರು ಐದು ದಿನಗಳ ಹಿಂದೆ ಮೈಸೂರು ಜಿಲ್ಲೆ ತಿ.ನರಸಿಪುರ ತಾಲ್ಲೂಕಿನ ಕನ್ನಹಳ್ಳಿ ಗ್ರಾಮದ ಚೆನ್ನಾಜಮ್ಮ ಅವರನ್ನು ಮದುವೆಯಾಗಿದ್ದರು. ಇಬ್ಬರ ಮನೆಯವರು, ಸಂಬಂಧಿಕರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹ ನಡೆದಿತ್ತು.

ಮೂರು ದಿನಗಳ ಬಳಿಕ ತಮಗೆ ಅನಾರೋಗ್ಯ ಇರುವುದರಿಂದ ಯಾವುದೇ ಸಂಪ್ರದಾಯ, ಆಚರಣೆಗಳು ಬೇಡ ಎಂದು ಸತೀಶ್‌ ಬಾಬು ಹೇಳಿದ್ದರು. ಹಾಗಿದ್ದರೂ ಪ್ರತಿದಿನ ಎಂದಿನಂತೆ ಕೆಲಸ ಮಾಡುತ್ತಿದ್ದರು. ಕೃಷಿಕರಾಗಿದ್ದ ಅವರು ಭಾನುವಾರ ಬೆಳಿಗ್ಗೆ ಜಮೀನಿಗೆ ಹೋಗಿದ್ದರು. ಅಲ್ಲಿಂದ ಮನೆಗೆ ವಾಪಸ್‌ ಆದ ಬಳಿಕ ಕೊಠಡಿಗೆ ಹೋಗಿ ನೇಣು ಹಾಕಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಆತ್ಮಹತ್ಯೆ ತಡೆಗಟ್ಟಲು ಮತ್ತು ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ಸಹಯೋಗದೊಂದಿಗೆ SAHAI ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ಸಂಪರ್ಕಸಂಖ್ಯೆ: 080 - 25497777
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ