ಏ.17ರಿಂದ ಬೇಸಿಗೆ ಶಿಬಿರ
ತುಮಕೂರು,ಏ.11: ಜಿಲ್ಲಾ ಬಾಲಭವನ ಸಮಿತಿ ವತಿಯಿಂದ 2023-24ನೇ ಸಾಲಿನ ಏಪ್ರಿಲ್ 17 ರಿಂದ 27ರವರೆಗೆ 5 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ “ಬೇಸಿಗೆ ಶಿಬಿರ”ವನ್ನು ಆಯೋಜಿಸಲಾಗಿದೆ.
ಆಸಕ್ತ ಪಾಲಕರು ಏಪ್ರಿಲ್ 15ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಜಿಲ್ಲಾ ಬಾಲಭವನ ಕಚೇರಿಯಲ್ಲಿ ತಮ್ಮ ಮಕ್ಕಳ ಹೆಸರನ್ನು
ನೋಂದಾಯಿಸಿಕೊಳ್ಳಬಹುದು. ಶಿಬಿರದಲ್ಲಿ 60 ಮಕ್ಕಳು ಮಾತ್ರ ಭಾಗವಹಿಸಲು ಅವಕಾಶವಿರುವುದರಿಂದ ಮೊದಲು ನೋಂದಾಯಿಸಿಕೊಂಡವರಿಗೆ ಮಾತ್ರ ಆದ್ಯತೆ ನೀಡಲಾಗುವುದು.
ಸರ್ಕಾರಿ ಶಾಲಾ ಮಕ್ಕಳು, ಗ್ರಾಮೀಣ,ಹೋಬಳಿ ಮಟ್ಟದ ಮತ್ತು ಸೌಲಭ್ಯ ವಂಚಿತ ಮಕ್ಕಳು, ಸರ್ಕಾರಿ ಸುಧಾರಣಾ ಸಂಸ್ಥೆಗಳ ಬಾಲಕ/ಬಾಲಕಿಯರ ಬಾಲ ಮಂದಿರದ ಮಕ್ಕಳು ಹಾಗೂ ವಿಕಲಚೇತನ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ವಿಶೇಷ ಆದ್ಯತೆ ನೀಡುವುದು.
ಶಿಬಿರದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಮಧ್ಯಾಹ್ನದ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಮೊ.ಸಂ. 9901890079, 9008982260ಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.