Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಫ್‌ಸಿಐ ಕೇಂದ್ರದ ಕೈಗೊಂಬೆಯಾಗಿದೆ: ಸುರ್ಜೇವಾಲ


ಸುದ್ದಿಮೂಲ ವಾರ್ತೆ





ಬೆಂಗಳೂರು, ಜೂ,15: ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್ಚಿನ ಅಕ್ಕಿ ವಿತರಣೆಗೆ ಕೇಂದ್ರದ ಕೈಗೊಂಬೆಯಾಗಿರುವ ಭಾರತೀಯ ಆಹಾರ ನಿಗಮ ನಿರಾಕರಿಸಿರುವುದು ಬಿಜೆಪಿಯ ಬಡವರ ವಿರೋಧಿ ಹಾಗೂ ಪ್ರಧಾನಿಯ ಶತ್ರುತ್ವದ ನೀತಿ ಬಯಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಟೀಕಿಸಿದ್ದಾರೆ.

ರಾಜ್ಯಕ್ಕೆ ಅನ್ಯಾಯ ಮಾಡಿರುವ ಧೋರಣೆ ಪ್ರತಿಭಟಿಸಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಅನ್ನಭಾಗ್ಯ ಯೋಜನೆಯಲ್ಲಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಉಚಿತ ನೀಡಲಾಗುವುದು. 1.28 ಕೋಟಿ ಕುಟುಂಬಗಳ 4.42 ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಇದಕ್ಕೆ ಬೇಕಾಗುವ ₹11,000 ಕೋಟಿ ನೀಡಲು ಸಿದ್ಧವಿದೆ. ಆದರೂ ಮೋದಿ ಸರ್ಕಾರ ಭಾರತೀಯ ಆಹಾರ ನಿಗಮಕ್ಕೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದಂತೆ ನಿರ್ದೇಶನ ನೀಡಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಭಾರತೀಯ ಆಹಾರ ನಿಗಮದ ಬಳಿ ಹೆಚ್ಚುವರಿ ಅಕ್ಕಿ ದಾಸ್ತಾನು ಇದ್ದು, ಎಫ್.ಸಿ.ಐ ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಅಕ್ಕಿ ಮಾರಲು ಮುಂದಾಗಿದೆ, ಆದರೆ ರಾಜ್ಯಕ್ಕೆ ನೀಡಲು ಸಿದ್ಧವಿಲ್ಲ. ಇದು ಭ್ರಷ್ಟ ಬಿಜೆಪಿಯನ್ನು ಬಡಿದೊಡಿಸಿದ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಮತ್ತು ಬಡವರ ವಿರುದ್ಧ ಬಿಜೆಪಿ ಹಾಗೂ ಮೋದಿ ಸರ್ಕಾರಕ್ಕೆ ಇರುವ ದ್ವೇಷವನ್ನು ತೋರುತ್ತಿದೆ ಎಂದಿದ್ದಾರೆ.

ಇಲ್ಲಿರುವ ಪ್ರಮುಖ ಪ್ರಶ್ನೆ ಎಂದರೆ, ತನ್ನ ಸೋಲಿನಿಂದಾಗಿ ಜನರಿಗೆ ಅನ್ನ ನಿರಾಕರಿಸುವಷ್ಟರ ಮಟ್ಟಿಗೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಕುರುಡರಾಗಿದ್ದಾರೆಯೇ?. ಎಫ್.ಸಿ.ಐ ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಅಕ್ಕಿ ಮಾರಲು ಸಿದ್ಧವಿದೆ. ಆದರೆ, ರಾಜ್ಯಕ್ಕೆ ಉತ್ತಮ ದರದಲ್ಲಿ ಅಕ್ಕಿ ನೀಡಲು ನಿರ್ಬಂಧ ಹೇರಿರುವುದು ಏಕೆ ಎಂದು ಸುರ್ಜೇವಾಲ ಖಾರವಾಗಿ ಪ್ರಶ್ನಿಸಿದ್ದಾರೆ.

ರಾಜ್ಯದ ಸಂಸದರು, ಕೇಂದ್ರದ ಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಕಂಡು ಮೌನವಾಗಿರುವುದೇಕೆ? ಇಷ್ಟಾದರೂ ಅವರು ಸಂಸದ ಹಾಗೂ ಸಚಿವ ಸ್ಥಾನದಲ್ಲಿ ಒಂದು ದಿನ ಮುಂದುವರಿಯಲು ಯೋಗ್ಯರೇ? ರಾಜ್ಯದ ಆರೂವರೆ ಕೋಟಿ ಜನರಿಗೆ ದ್ರೋಹ ಬಗೆದಿರುವ ಅವರು ಕೂಡಲೇ ಯಾಕೆ ರಾಜೀನಾಮೆ ನೀಡಬಾರದು? ಎಂದು ಸರ್ಜೇವಾಲ ಪ್ರಶ್ನಿಸಿದ್ದಾರೆ.





Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ