Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‍ಟಿ ಸಮುದಾಯದ ಅವಹೇಳನ ಮಾಡಿದ ಸುರ್ಜೇವಾಲಾ: ಸಿದ್ದರಾಜು

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.5: ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ್ದನ್ನು ಸಹಿಸಲಾಗದೆ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯಾದ ರಣದೀಪ್ ಸುರ್ಜೇವಾಲಾರವರು “ಇ.ಡಿ. ಕೇಸನ್ನು ತಪ್ಪಿಸಲು ಸುದೀಪ್ ಬಿಜೆಪಿ ಸೇರಿದ್ದಾರೆ” ಎಂದು ಆರೋಪಿಸಿದ್ದಾರೆ. ಇದು ಎಸ್‍ಟಿ ಸಮುದಾಯಕ್ಕೆ ಮಾಡಿದ ಅವಮಾನ ಮತ್ತು ಕನ್ನಡದ ಕಲಾವಿದರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದ್ದಾರೆ.

ಕಷ್ಟದಲ್ಲಿ ಇದ್ದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವಾದುದನ್ನು ಪರಿಗಣಿಸಿ, ಅವರ ಮೇಲಿನ ಗೌರವ, ಅಭಿಮಾನದಿಂದ ಸುದೀಪ್ ಅವರು ಬೊಮ್ಮಾಯಿ ಮತ್ತು ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಬಿಜೆಪಿ ಪಕ್ಷ ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೋರಾಡುವಂತ ಪಕ್ಷ ಅಂತ ಸಮುದಾಯದಿಂದ ಬಂದಿರುವ ಸುದೀಪ್ ಅವರ ಬಗ್ಗೆ ಹೀಗೆ ಹೀನಾಯವಾಗಿ ಟೀಕಿಸಿರುವುದು ಒಪ್ಪಲಾಗುವುದಿಲ್ಲ ಎಂದಿದ್ದಾರೆ.

ಸಾಮಾಜಿಕ ನ್ಯಾಯಕ್ಕೆ ತಮ್ಮ ಸೇವೆ ಸಲ್ಲಿಸುತ್ತಿರುವ ಕಲಾವಿದರನ್ನು ಸುರ್ಜೇವಾಲಾ ಈ ಹೇಳಿಕೆ ನೀಡಿದ್ದು ಖಂಡನೀಯ ಎಂದು ತಿಳಿಸಿದ್ದಾರೆ. ಇದು ಎಸ್‍ಟಿ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಹುತೇಕ ನಿನ್ನೆ ಕಳುಹಿಸಿರುವ ಪತ್ರ ಯಾವುದೇ ಫಲ ನೀಡದೆ ಇರುವ ಕಾರಣದಿಂದ ಇವತ್ತು ಸುರ್ಜೇವಾಲಾ ಅವರು ಇಂತಹ ಸುಳ್ಳನ್ನು ಹಬ್ಬಿಸುತ್ತಿದ್ದಾರೆ ಎಂದು ಸಿದ್ದರಾಜು ಆರೋಪಿಸಿದ್ದಾರೆ.

ಆದರೆ, ಜನಮನ್ನಣೆ ಪಡೆದ ಚಿತ್ರನಟನಿಗೆ ಮತ್ತು ಜಾತಿಗೆ ಅವಮಾನ ಮಾಡಿದ ಸುರ್ಜೇವಾಲಾ ಹೇಳಿಕೆಯನ್ನು ರಾಜ್ಯದ ಪ್ರಜ್ಞಾವಂತ ಮತದಾರರು ಗಮನಿಸಿ, ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ನಾಮಾವಶೇಷ ಮಾಡುವುದು ಖಚಿತ ಎಂದು ಸಿದ್ದರಾಜು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ