Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಹೀನ್ ಕಾಲೇಜ್‌ನಿಂದ ಸಮೀಕ್ಷೆ : ಸಾಮಾಜಿಕ ತಾಣ ನಿರ್ಬಂಧಕ್ಕೆ ಪೋಷಕರ ಒತ್ತಾಯ

ಸುದ್ದಿಮೂಲ ವಾರ್ತೆ ಬೀದರ್, ೆ.21:
ಶಾಹೀನ್ ಪದವಿ ಕಾಲೇಜು ವಿದ್ಯಾಾರ್ಥಿಗಳು ನಗರದಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ 80 ರಷ್ಟು ಪಾಲಕರು 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ ಎಂದು ಕಾಲೇಜಿನ ಪ್ರಾಾಚಾರ್ಯ ಅ್ರಾನಾಜ್ ಹೇಳಿದರು.
ನಗರದ ಜಿಲ್ಲಾ ಪತ್ರಿಿಕಾ ಭವನದಲ್ಲಿ ಶನಿವಾರ ಪತ್ರಿಿಕಾಗೋಷ್ಟಿಿ ಉದ್ದೇಶಿಸಿ ಮಾತನಾಡಿರುವ ಅವರು, ಈಗಾಗಲೇ ಆಸ್ಟ್ರೇಲಿಯಾದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಅಂತಹುದೇ ಕಾನೂನನ್ನು ದೇಶದಲ್ಲೂ ಜಾರಿಗೆ ತರಬೇಕು ಎಂದು ಪಾಲಕರು ಅಭಿಪ್ರಾಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಅತಿಯಾದ ಮೊಬೈಲ್ ವೀಕ್ಷಣೆಯಿಂದ ಮಕ್ಕಳ ಮನಸ್ಸಿಿನ ಮೇಲೆ ಆಗುತ್ತಿಿರುವ ಪರಿಣಾಮ, ಮಹಿಳೆಯರ ಸುರಕ್ಷತೆಗಾಗಿ ಇರುವ ಕಾನೂನು ಹಾಗೂ ಸ್ವಚ್ಛ ಭಾರತ ಅಭಿಯಾನ ಕುರಿತು ವಿದ್ಯಾಾರ್ಥಿಗಳು ಸಮೀಕ್ಷೆ ನಡೆಸಿದರು ಎಂದು ಹೇಳಿದರು.
ಮೂರು ವಿಷಯಗಳ ಕುರಿತು ಜನವರಿ 10 ರಿಂದ ೆಬ್ರುವರಿ 5 ರ ವರೆಗೆ ನಡೆದ ಸಮೀಕ್ಷೆಯಲ್ಲಿ ಬಿ.ಎ, ಬಿ.ಎಸ್ಸಿಿ, ಬಿ.ಕಾಂ ಹಾಗೂ ಬಿ.ಸಿ.ಎ. ಓದುತ್ತಿಿರುವ 200 ವಿದ್ಯಾಾರ್ಥಿಗಳು ಪಾಲ್ಗೊೊಂಡಿದ್ದರು. ನಗರದ ಓಲ್ಡ್ ಸಿಟಿ, ೈಜಪುರ, ಶಹಾಪುರ ಗೇಟ್, ರಾಜಗೊಂಡ ಕಾಲೊನಿ ಹಾಗೂ ಗುಂಪಾ ಪ್ರದೇಶದ ಒಟ್ಟು 825 ಮನೆಗಳಿಗೆ ಭೇಟಿ ಕೊಟ್ಟು ಪಾಲಕರ ಅಭಿಪ್ರಾಾಯ ಸಂಗ್ರಹಿಸಿದ್ದರು ಎಂದು ತಿಳಿಸಿದರು.
ಸಮೀಕ್ಷೆ ವೇಳೆ ಮೂರು ವಿಷಯಗಳ ತಲಾ 20 ಪ್ರಶ್ನೆೆಗಳನ್ನು ಕೇಳಿ, ಅವರ ಅಭಿಪ್ರಾಾಯ ದಾಖಲಿಸಿಕೊಂಡಿದ್ದರು. ಯಾರೊಬ್ಬರ ವೈಯಕ್ತಿಿಕ ಮಾಹಿತಿ ಅಥವಾ ಮೊಬೈಲ್ ಸಂಖ್ಯೆೆ ಪಡೆದಿಲ್ಲ ಎಂದು ಹೇಳಿದರು.
ಜನರ ಅಭಿಪ್ರಾಾಯ ಸಂಗ್ರಹಿಸುವುದು ಹಾಗೂ ಅದನ್ನು ಆಡಳಿತದ ಮುಂದೆ ಇಡುವುದು ವಿದ್ಯಾಾರ್ಥಿಗಳ ಸಮೀಕ್ಷೆಯ ಉದ್ದೇಶವಾಗಿತ್ತು. ಸಮೀಕ್ಷೆಯ ಆಧಾರದ ಮೇಲೆ ಆಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದೇ ವಿದ್ಯಾಾರ್ಥಿಗಳ ಆಶಯವಾಗಿದೆ ಎಂದು ಅ್ರಾನಾಜ್ ಹೇಳಿದರು.
ಕಾಲೇಜಿನ ಪ್ರಾಾಧ್ಯಾಾಪಕರಾದ ಪ್ರೊೊ.ಅಭಿಲಾಷ ಪೋಲದಾಸ್, ಡಾ.ಸಿರಾಜುಲ್ ಹಸನ್, ಪ್ರೊೊ.ಮಹಮ್ಮದ್ ಇಕ್ಲಾಾಕ್, ಪ್ರೊೊ.ಬಿಲಾಲ್ ಅಹಮ್ಮದ್, ಪ್ರೊೊ.ಅಶ್ವಿಿನಿ ಹಾಗೂ ಇತರರು ಪತ್ರಿಿಕಾಗೋಷ್ಟಿಿಯಲ್ಲಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ